Sunday, November 24, 2024
Sunday, November 24, 2024

ಯುವ ಪ್ರತಿಭೆಗಳ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ- ಕೆ.ಎಸ್.ಈಶ್ವರಪ್ಪ

Date:

ಯುವ ಜನತೆಯಲ್ಲಿನ ಪ್ರತಿಭೆ ನಮ್ಮ ಕಲ್ಪನೆಗೂ ಮೀರಿದ್ದಾಗಿದ್ದು, ಇಂತಹ ಪ್ರತಿಭೆಗಳನ್ನು ಅನಾವರಣಗೊಳಿಸಲು ಯುವಜನೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಸರ್ಗ ಮಹಿಳಾ ಮಂಡಳಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ, ನಗರ ಪ್ರದೇಶದ ಯುವ ಜನತೆಯ ಪ್ರತಿಭೆ ಅಸಾಮಾನ್ಯವಾಗಿದೆ. ಇಂತಹ ಪ್ರತಿಭೆಯನ್ನು ಹೊರತರಲು ಸರ್ಕಾರ ಯುವಜನೋತ್ಸವದ ವ್ಯವಸ್ಥೆ ಮಾಡಿದೆ. ಶಾಲಾ-ಕಾಲೇಜುಗಳಲ್ಲಿ ಓದಿನ ಕಡೆಗೆ ಹೆಚ್ಚಿನ ಗಮನ ಇರುತ್ತದೆ. ಆದರೆ ಓದಿನೊಂದಿಗೆ ತಮ್ಮಲ್ಲಿರುವ ಪ್ರತಿಭೆಗೂ ಸಹ ಮಹತ್ವ ನೀಡಬೇಕು. ಆದ್ದರಿಂದಲೇ ಸರ್ಕಾರ ಯುವಜನೋತ್ಸವದ ವ್ಯವಸ್ಥೆ ಮಾಡಿದೆ.

ಸಂಗೀತ, ನೃತ್ಯ ಇತ್ಯಾದಿ ಸಾಂಸ್ಕೃತಿಕ ಚಟುವಟಿಕೆಗಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಅದರ ಕಲಿಕೆಯಲ್ಲಿ ತೊಡಗಬೇಕು. ಪ್ರಸ್ತುತ ಇವನ್ನೆಲ್ಲ ಕಲಿಸಲು ಅನೇಕ ಶಿಕ್ಷಕರು ಲಭ್ಯವಿದ್ದಾರೆ. ಹಾಗೂ ಪ್ರತಿಭೆಗಳ ಅನಾವರಣಕ್ಕೆ ಅವಕಾಶಗಳಿವೆ. ಅದರ ಸದ್ಬಳಕೆ ಮಾಡಿಕೊಳ್ಳಬೇಕು.

ಕಲೆಯಿಂದ ಕಲಾವಿದರಿಗೆ ಆನಂದ, ಆತ್ಮತೃಪ್ತಿ ಸಿಗುತ್ತದೆ, ಜೊತೆಗೆ ಕಲಾವಿದರು ಸಮಾಜದ ಆಸ್ತಿಯಾಗಿ ಹೊರಹೊಮ್ಮುತ್ತಾರೆ. ಆದ್ದರಿಂದ ಪ್ರತಿಭೆಗಳನ್ನು ಗುರುತಿಸಿ, ಬೆಳೆಸಬೇಕೆಂದು ಕರೆ ನೀಡಿದ ಅವರು ಇಂದಿನ ಸ್ಪರ್ಧೆಯಲ್ಲಿ ಯುವಜನತೆ ಉತ್ತಮವಾಗಿ ಸ್ಪರ್ಧಿಸಿ ಇಲ್ಲಿಂದ ರಾಜ್ಯ ಮಟ್ಟಕ್ಕೆ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಯಶಸ್ವಿಯಾಗಬೇಕೆಂದು ಹಾರೈಸಿದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಮಾತನಾಡಿ, ಅತಿ ಹೆಚ್ಚು ಸಂಖ್ಯೆಯಲ್ಲಿ ಯುವಜನತೆಯನ್ನು ಹೊಂದಿರುವ ದೇಶ ನಮ್ಮದು. ಯುವ ಭಾರತವು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರಸ್ತುತ ಮುಂಚೂಣಿಯಲ್ಲಿದೆ.

ಇಲ್ಲಿ ಸ್ಪರ್ಧಿಸಿದ ಯುವಜನತೆ ಉನ್ನತ ಮಟ್ಟದಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಆಶಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಯುವಜನೋತ್ಸವಕ್ಕೆ ಸುಮಾರು 400 ಜನ ಸ್ಪರ್ಧಿಗಳು ನೋಂದಾಯಿಸಿಕೊಂಡಿದ್ದು, ಆಶುಭಾಷಣ, ಏಕಪಾತ್ರಭಿನಯ, ಶಾಸ್ತ್ರೀಯ ನೃತ್ಯ, ಸಂಗೀತ, ವಾದ್ಯ, ಜಾನಪದ ಗೀತಿ, ನೃತ್ಯ ಸೇರಿದಂತೆ
16 ಸ್ಪರ್ಧೆಗಳು ನಡೆಯಲಿವೆ.

ಇಲ್ಲಿ ಪ್ರಥಮ ಸ್ಥಾನ ಪಡೆದಯವರು ನೇರವಾಗಿ ಚಿತ್ರದುರ್ಗಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗುತ್ತಾರೆ. ರಾಜ್ಯ ಮಟ್ಟದಲ್ಲಿ ಆಯ್ಕೆಯಾದವರು ಮಹಾರಾಷ್ಟ್ರದ ಪೂನಾದಲ್ಲಿ ನಡಯುವ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಉಮೇಶ್, ತೀರ್ಪುಗಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Priyanka Gandhi ಕೇರಳ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಅತ್ಯಧಿಕ ಮತಗಳಿಂದ ಆಯ್ಕೆ

Priyanka Gandhi ಪ್ರಿಯಾಂಕಾ ಗಾಂಧಿ ವಾದ್ರಾ 4,10,931 ಮತಗಳ ಅಂತರದಿಂದ ಗೆದ್ದಿದ್ದಾರೆ,...

SP Mithun Kumar ಮದ್ಯವರ್ಜನ ಶಿಬಿರ ಚಾಲನೆ, ಸಮಾಜಕ್ಕೆ ಹೆಚ್ಚು ಉಪಯುಕ್ತ- ಎಸ್.ಪಿ .ಮಿಥುನ್ ಕುಮಾರ್

SP Mithun Kumar ಶಿವಮೊಗ್ಗ,ನ.22 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

Kuvempu Birthday ಕುವೆಂಪು ಜನ್ಮದಿನದ ವಿಶೇಷ ಷಿಕಾರಿಪುರದಲ್ಲಿ ನಾಟಕ ಸ್ಪರ್ಧೆ

Kuvempu Birthday ಸಹ್ಯಾದ್ರಿ ರಂಗತರಂಗ ನಾಟಕ ಸ್ಪರ್ಧೆ ಶಿವಮೊಗ್ಗ ನಗರದ ಸಹಾದ್ರಿ...

Dargah Shah Aleem Deewan ಶಿವಮೊಗ್ಗದ ದಿವಾನ್ ಭಾಬಾ ದರ್ಗಾದಲ್ಲಿ ನ.24 ರಿಂದ 26 ವರೆಗೆ ಉರುಸ್

Dargah Shah Aleem Deewan ಶಿವಮೊಗ್ಗದ ಹಜ್ರತ್ ಸೈಯದ್ ಶಾ ಅಲೀಮ್...