Wednesday, July 8, 2026
Wednesday, July 8, 2026

ಮಾಂಡೋಸ್ ಗೆ ತುತ್ತಾದ ಭತ್ತದ ಬೆಳೆ ಸಮೀಕ್ಷೆ ಮಾಡಿ ವರದಿ ನೀಡಿ- ಡಾ.ಸೆಲ್ವಮಣಿ

Date:

ಶಿವಮೊಗ್ಗ ಜಿಲ್ಲಾಧಿಕಾರಿಗಳು ತಮ್ಮ ಕಛೇರಿ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದರು.

ಮಾಂಡೋಸ್ ಚಂಡಮಾರುತದಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಇದರಿಂದಾಗಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಇದ್ದು, ಆಯಾ ತಾಲೂಕಿನ ತಹಶೀಲ್ದಾರರಿಗೆ ಖುದ್ದಾಗಿ ಬಾದಿತ ಸ್ಥಳಕ್ಕೆ ಭೇಟಿ ನೀಡಿ, ಸಮೀಕ್ಷೆ ನಡೆಸಿ, ವಾಸ್ತವ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ಕಂದಾಯ ಮತ್ತು ಕೃಷಿ ಇಲಾಖೆಯ ವತಿಯಿಂದ ಜಂಟಿ ವರದಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ. ಜೊತೆಗೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಂದ ಮಾಹಿತಿ ಪಡೆದು ಸರ್ಕಾರದ ಸೂಚನೆಯಂತೆ ಡಿಸೆಂಬರ್ 20ರೊಳಗಾಗಿ ಶರಾವತಿ ಸಂತ್ರಸ್ಥರ ಸಮಸ್ಯೆಗಳ ಕುರಿತ ಸಮಗ್ರ ವರದಿ ನೀಡಲಾಗುವುದು. ಈ ಹಿಂದಿನ ಸಮೀಕ್ಷೆಯ ಮಾಹಿತಿ, ಸರ್ವೇ ನಂ. ಹಾಗೂ ಗ್ರಾಮಾವಾರು ಮಾಹಿತಿ ಸಂಗ್ರಹಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಪ್ರಕಾಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ, ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...