ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಸಹಯೋಗದಲ್ಲಿ ಡಿ.17ರಂದು ಸಂಜೆ 5.30ಕ್ಕೆ ಪತ್ರಿಕಾ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್. ಯಡಗೆರೆ ಹೇಳಿದರು.
ಶಿವಮೊಗ್ಗದ ಪ್ರೆಸ್‌ಟ್ರಸ್ಟ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸುವರು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಪ್ರತಿಭಾ ಪುರಸ್ಕಾರ ನೀಡುವರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಮಾಸಾಶನ ಸಮಿತಿ ಸದಸ್ಯರಾಗಿ ನೇಮಕಗೊಂಡ ಎನ್. ಮಂಜುನಾಥ್ ಅವರನ್ನು ಸನ್ಮಾನಿಸಲಾಗುತ್ತಿದೆ. ಸಂಘದ ಗೌರವಾಧ್ಯಕ್ಷ ಎಸ್. ಚಂದ್ರಕಾಂತ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ, ಪ್ರೆಸ್ ಟ್ರಸ್ಟ್ ಕಾರ್ಯದರ್ಶಿ ನಾರಾಜ್ ನೇರಿಗೆ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಅನೇಕ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದಿಂದ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳು ಮತ್ತು ವಿದ್ಯಾರ್ಥಿಗಳಿಗಾಗಿ ಅನೇಕ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಶನಿವಾರ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯಲಿದೆ.
ಬಹುಮಾನ ಪಡೆದವರ ಜೊತೆಗೆ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸ್ಪರ್ಧೆಯ ಪ್ರಮಾಣಪತ್ರವನ್ನು ನೀಡಲಾಗುತ್ತಿದೆ. ಜೊತೆಗೆ ಮುದ್ದು ಕಂದ ಸ್ಪರ್ಧೆಗೆ ಬಂದ ಪೋಟೊ ಹಾಗೂ ಚಿತ್ರಕಲೆಯ ಸ್ಪರ್ಧೆಗೆ ಬಂದ ಚಿತ್ರಕಲೆಗಳನ್ನು ಪ್ರದರ್ಶಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹಾಗೂ ಸಂಘದ ಸದಸ್ಯರು ಹೆಚ್ಚಿಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
1ರಿಂದ 3ವರ್ಷದೊಳಗಿನ ಮಕ್ಕಳಿಗೆ ನಡೆದ ಮುದ್ದು ಕಂದ ಸ್ಪರ್ಧೆಯಲ್ಲಿ ಯುಕ್ತಾವಿ ಶಿವಮೊಗ್ಗ- ಪ್ರಥಮ ಸ್ಥಾನ, ವಂಶಿಕಾ ವಿ. ಶ್ಯಾನಬೋಗ್- ದ್ವಿತೀಯ ಸ್ಥಾನ, ಸುವ್ಯಕ್ತ ಎಸ್.- ಹೊಳ್ಳಗೆ ತೃತೀಯ ಸ್ಥಾನ ಲಭಿಸಿದೆ. 1 ರಿಂದ 4 ಮತ್ತು 5 ರಿಂದ 7 ತರಗತಿಯ ಮಕ್ಕಳಿಗೆ ಪ್ರಕೃತಿ ಕುರಿತು ಪ್ರತ್ಯೇಕ ವಿಭಾಗದಲ್ಲಿ ಚಿತ್ರಕಲೆ ಸ್ಪರ್ಧೆ ನಡೆದಿದೆ.
ಇದರಲ್ಲಿ 1ರಿಂದ 5ನೇ ತರಗತಿ ವಿಭಾಗದಲ್ಲಿ ಎಸ್. ಸಮೃದ್- ಪ್ರಥಮ ಸ್ಥಾನ, ಮಹಮ್ಮದ್ ಸೌದ್ ತಲ್ಹಾ- ದ್ವಿತೀಯ ಸ್ಥಾನ, ಎಸ್.ಪಿ. ದೃತಿ- ತೃತೀಯ ಸ್ಥಾನ ಗಳಿಸಿದ್ದಾರೆ. 5ರಿಂದ 7ತರಗತಿ ವಿಭಾಗದಲ್ಲಿ ಯು.ಕೆ. ಯಶಿಕಾ- ಪ್ರಥಮ, ಟಿ.ಎನ್. ಪ್ರಥಮ್- ದ್ವಿತೀಯ, ಮಹತಿ ಎಂ. ದೀಕ್ಷಿತ್- ತೃತೀಯ ಸ್ಥಾನ ಗಳಿಸಿದ್ದಾರೆ. ಪ್ರೌಢ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಭಾರತಿ ವಿದ್ಯಾಭವನದ ವಿದ್ಯಾರ್ಥಿನಿ ಧನ್ಯ ಎಸ್. ಉಮರಾಣಿ, ದ್ವಿತೀಯ ಸ್ಥಾನವನ್ನು ಸಾಗರದ ಪ್ರಜ್ಞಾ ಭಾರತಿ ಶಾಲೆಯ ಚಿರಾತನ ಭಡ್ತಿ, ತೃತೀಯ ಸ್ಥಾಾನವನ್ನು ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್‌ನ ಎಸ್.ಎಸ್. ಅಕ್ಷತಾ ಪಡೆದಿದ್ದಾಾರೆ ಎಂದು ವಿವರಿಸಿದರು.