Monday, November 25, 2024
Monday, November 25, 2024

ಹವಾಮಾನ ಮುನ್ಸೂಚನೆ ರಾಜ್ಯದಲ್ಲಿ ಮತ್ತೆ ಮಳೆ

Date:

ಕರಾವಳಿ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ 5.8ಕಿಲೋ ಮೀಟರ್ ಎತ್ತರದ ಸುಳಿಗಾಳಿ ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಉಂಟಾಗುವುದಿಲ್ಲ.

ಈ ಕಾರಣಕ್ಕೆ ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳಲಿದೆ.

ಬೆಂಗಳೂರು ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದರಿಂದಾಗಿ ನಿರಂತರವಾಗಿ ಚಳಿ, ಮಳೆ, ವಾತವರಣ ನಿರ್ಮಾಣವಾಗಿತ್ತು. ಇದರಿಂದ ಜನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga City Corporation ಶಿವಮೊಗ್ಗದಲ್ಲಿ ವಾಣಿಜ್ಯ ಸಂಕೀರ್ಣ & ಯೋಗ ಭವನ ‌ಲೋಕಾರ್ಪಣೆ

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗದ ವಿನೋಬನಗರ...

MESCOM ನವೆಂಬರ್ 27. ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ಸರಬರಾಜು

ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ...