ಅಪರಾಧಗಳನ್ನು ತಡೆಗಟ್ಟಬೇಕಾದರೆ ಮೊದಲು ನಾವು ಜಾಗೃತರಾಗಬೇಕು. ಯುವಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಕುದುರೆಮುಖ ವೃತ್ತ ನಿರೀಕ್ಷಕ ಸಿ.ಎನ್.ರಮೇಶ್ ಅವರು ಹೇಳಿದರು.
ಕಳಸದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ರಾಷ್ಟೀಯ ಸೇವಾ ಯೋಜನೆ ಮತ್ತು ಕಾನೂನು ಅರಿವು ಜಾಗೃತಿ ಘಟಕ ಏರ್ಪಡಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಿಳೆಯರು ಹೊರಗಡೆ ತೆರಳುವ ಸಂದರ್ಭದಲ್ಲಿ ಚಿನ್ನಾಭರಣ ಬಗ್ಗೆ ಮುಂಜಾಗ್ರತೆ ವಹಿಸುವುದು ಸೂಕ್ತವಾಗಿದೆ. ಜೊತೆಗೆ ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸಿಕೊಳ್ಳಬೇಕು. ಯುವಕರು ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಅಮೂಲ್ಯ ಜೀವವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಸಂಪನ್ಮೂಲ ವ್ಯಕ್ತಿ ಕಳಸ ಠಾಣೆಯ ಸಹಾಯಕ ಸಬ್‌ಇನ್ಸ್ಪೆಕ್ಟರ್ ಡಾ.ಸಿ.ಆರ್.ಮೋಹನ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಸದಾ ಹೆತ್ತವರ ಸಲಹೆಗಳನ್ನು ಪಾಲಿಸುವುದರೊಂದಿಗೆ ದೇಶದ ಕಾನೂನನ್ನು ಗೌರವಿಸಬೇಕು. ಮಾದಕ ದ್ರವ್ಯಗಳ ಕುರಿತು ಎಚ್ಚರಿಕೆ ವಹಿಸಬೇಕು. ಪರವಾನಗಿ ಮತ್ತಿತರ ಸೂಕ್ತ ದಾಖಲೆಗಳಿಲ್ಲದೆ ವಾಹನಗಳನ್ನು ಚಲಾಯಿಸಬಾರದು. ಬ್ಯಾಂಕ್ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಪಾಸ್‌ವರ್ಡ್ಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ವಿನಯ್ ಕುಮಾರ್ ಶೆಟ್ಟಿ ವಿದ್ಯಾರ್ಜನೆಯೊಂದಿಗೆ ಸಾಮಾನ್ಯ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಪೊಲೀಸ್ ಇಲಾಖೆ ಹಮ್ಮಿ ಕೊಂಡಿರುವ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕೈ ಜೋಡಿಸಿ ಸಮಾಜ ದಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ರಾಷ್ಟಿçÃಯ ಸೇವಾ ಯೋಜನಾ ಮುಖ್ಯಸ್ಥ ವಿಶು ಕುಮಾರ್, ಕಾಲೇಜ್ ನಾ ಎಲ್ಲಾ ಬೋಧಕರು ಹಾಜರಿದ್ದರು.