Thursday, September 17, 2026
Thursday, September 17, 2026

ಫೆಲೋಶಿಪ್ ಗೆ ಅರ್ಜಿ ಆಹ್ವಾನ

Date:

2022-23 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
2022-23 ನೇ ಸಾಲಿನಲ್ಲಿ ರಾಜ್ಯದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು 2023 ರ ಜನವರಿ 13 ಕಡೆಯ ದಿನವಾಗಿದ್ದು, ವಿದ್ಯಾರ್ಥಿಗಳು ಆನ್‍ಲೈನ್ ಅರ್ಜಿ ಪ್ರತಿ ಹಾಗೂ ಒಂದು ಸೆಟ್ ದೃಢೀಕೃತ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ದೂ.ಸಂ: 08182-222129, ಸಹಾಯವಾಣಿ ಸಂಖ್ಯೆ 8050770004 ಹಾಗೂ ಇಲಾಖಾ ವೆಬ್‍ಸೈಟ್ https://www.bcwd.karnataka.gov.in ನೋಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...