ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಏಕಾಏಕಿ ಏರಿಕೆಯಾಗಿದೆ. ಆದ್ದರಿಂದ ಹೆಚ್ಚಿಸಲು ಹಾಗೂ ಲಸಿಕಾ ಕರಣಕ್ಕೆ ಒತ್ತು ನೀಡಲು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.
ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಹಾಗೂ ಅಧಿಕಾರಿಗಳ ಸಭೆಯಲ್ಲಿ ದೇಶದಲ್ಲಿನ ಪರಿಸ್ಥಿತಿ ಅವಲೋಕಿಸಲಾಗಿದ್ದು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲಾಯಿತು.
ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ ಧರಿಸುವುದು ಸೇರಿ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಜ್ಞರು ನಾಗರಿಕರಿಗೆ ಸಲಹೆ ನೀಡಿದ್ದಾರೆ.
ಮುಂದೆ ಹಬ್ಬಗಳ ಋತು ಶುರುವಾಗಲಿದೆ. ಹೀಗಾಗಿ ಎಂತಹುದೇ ಪರಿಸ್ಥಿತಿ ಎದುರಾದರೂ ಸಜ್ಜಾಗಬೇಕು. ಕೋವಿಡ್ ನ ಹೊಸ ತಳಿಯ ಬಗ್ಗೆ ಜಾಗೃತರಾಗಿರಬೇಕು . ಸೊಂಕಿತರಿಂದ ಸಂಗ್ರಹಿಸಲಾಗುವ ಮಾದರಿಗಳನ್ನು ಪ್ರತಿದಿನವೂ ಕೇಂದ್ರ ಸರ್ಕಾರದ ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ ಐಎನ್ ಎಸ್ ಎಸಿ ಒಜಿಯ ಪ್ರಯೋಗಾಲಯಗಳಿಗೆ ಕಳುಹಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ.
ಚೀನಾ ಸೇರಿದಂತೆ ಇತರ ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರಲ್ಲಿ ಆಯುಧ ಕೆಲವರನ್ನ ಪರೀಕ್ಷೆಗೆ ಒಳಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಕೋವಿಡ್ ಇನ್ನು ಮುಗಿದಿಲ್ಲ. ಜಾಗೃತರಾಗಿರುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದೇನೆ. ಯಾವುದೇ ಪರಿಸ್ಥಿತಿ ನಿಭಾಯಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ತಿಳಿಸಿದ್ದಾರೆ.