2022 ರ ವರ್ಷವು ಅದ್ಭುತವಾಗಿದೆ, ಭಾರತವು ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದಾಗ ‘ಅಮೃತ್ ಕಾಲ’ ಪ್ರಾರಂಭವಾಯಿತು. ಭಾರತ ವೇಗವಾಗಿ ಪ್ರಗತಿ ಸಾಧಿಸಿದೆ ಮತ್ತು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ಮಾಸಿಕ ರೇಡಿಯೋ ಕಾರ್ಯಕ್ರಮವಾದ ‘ಮನ್ ಕಿ ಬಾತ್’ನ 96ನೇ ಆವೃತ್ತಿಯಲ್ಲಿ ಮಾತನಾಡಿದ ಮೋದಿಯವರು, ಪ್ರಪಂಚದ ಹಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ನಾವು ನೋಡುತ್ತಿದ್ದೇವೆ.
ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಹೆಚ್ಚಾಗುತ್ತಿದ್ದು, ನಾವೂ ಎಚ್ಚರವಹಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಂದು ಹೇಳಿದ್ದಾರೆ.
220 ಕೋಟಿ ಲಸಿಕೆಗಳ ದಾಖಲೆಯನ್ನು ಸಾಧಿಸಿತು. ರಫ್ತುಗಳಲ್ಲಿ USD 400 ಶತಕೋಟಿ ಗಡಿ ದಾಟಿದೆ. ಕೇಂದ್ರ ಸರ್ಕಾರದ ಆತ್ಮನಿರ್ಭರ್ ಭಾರತ್ ಉಪಕ್ರಮದ ಬಗ್ಗೆ ಮಾತನಾಡಿ, ಐಎನ್‌ಎಸ್ ವಿಕ್ರಾಂತ್ ಉಡಾವಣೆಯನ್ನು ಶ್ಲಾಘಿಸಿದರು. ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆಯ ಕಾರ್ಯಾರಂಭವು ಭಾರತದ 75 ವರ್ಷಗಳ ಸ್ವಾತಂತ್ರ್ಯದ ‘ಅಮೃತಕಾಲ್’ ಸಮಯದಲ್ಲಿ ಒಂದು ಮಹತ್ವದ ಸಂದರ್ಭವಾಗಿದೆ ಮತ್ತು ಇದು ದೇಶದ ಆತ್ಮವಿಶ್ವಾಸ ಮತ್ತು ಪರಾಕ್ರಮವನ್ನು ಸೂಚಿಸುತ್ತದೆ ಎಂದರು.
ಈ ಸ್ವದೇಶಿ ವಿಮಾನವಾಹಕ ನೌಕೆಯು ದೇಶದ ತಾಂತ್ರಿಕ ಕುಶಾಗ್ರಮತಿ ಮತ್ತು ಎಂಜಿನಿಯರಿಂಗ್ ಕೌಶಲ್ಯಕ್ಕೆ ಪುರಾವೆಯಾಗಿದೆ. ವಿಮಾನವಾಹಕ ಯುದ್ಧನೌಕೆಯನ್ನು ಉತ್ಪಾದಿಸಲು ಭಾರತದ ಸ್ವಾವಲಂಬನೆಯ ಈ ಕಾರ್ಯವು ದೇಶದ ರಕ್ಷಣಾ ಸ್ವದೇಶೀಕರಣ ಕಾರ್ಯಕ್ರಮಗಳು ಮತ್ತು ‘ಮೇಕ್ ಇನ್ ಇಂಡಿಯಾ’ ಅಭಿಯಾನವನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.