Monday, August 17, 2026
Monday, August 17, 2026

ಯುವಜನ ಯಾವುದೇ ಕಾರಣಕ್ಕೂ ಕ್ರೀಡೆಯನ್ನ ನಿರ್ಲಕ್ಷಿಸಬಾರದು- ಪ್ರೊ.ವೀರಭದ್ರಪ್ಪ

Date:

ಸಹ್ಯಾದ್ರಿ ವಾಣಿಜ್ಯ, ವಿಜ್ಞಾನ, ಕಲಾ ಕಾಲೇಜು ಆಯೋಜಿಸಿದ ಕುವೆಂಪು ವಿಶ್ವವಿದ್ಯಾಲಯ ಮಟ್ಟದ 35ನೇ ಅಂತರ್ ಕಾಲೇಜು ಅಥ್ಲೆಟಿಕ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಬಿ. ಪಿ ವೀರಭದ್ರಪ್ಪನವರು, “ನಮ್ಮ ಸಂಸ್ಕೃತಿಯಲ್ಲಿ ದೈಹಿಕ ಪರಿಶ್ರಮಕ್ಕೆ ಹೆಚ್ಚಿನ ಆದ್ಯತೆ ಇದೆ. ಬಹಳ ಹಿಂದಿನಿಂದಲೂ ನಮ್ಮ ಗ್ರಾಮೀಣ ಜನರು ಕ್ರೀಡೆಯನ್ನು ಬದುಕಿನ ಭಾಗವಾಗಿಸಿಕೊಂಡಿದ್ದಾರೆ. ತಮ್ಮ ಬಿಡುವಿನ ಸಮಯದಲ್ಲಿ ಹಲವಾರು ಜನಪದ ಕ್ರೀಡೆಗಳಿಗೆ ನಾಟಕ ಮೊದಲಾದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವ ನೀಡಿರುವುದನ್ನು ನಾವು ಕಾಣುತ್ತೇವೆ ಹಾಗಾಗಿ ಯುವಜನರು ಯಾವುದೇ ಕಾರಣಕ್ಕೂ ಕ್ರೀಡೆಯನ್ನು ನಿರ್ಲಕ್ಷಿಸಬಾರದು. ಅದು ದೈಹಿಕ ಆರೋಗ್ಯದ ಜೊತೆಗೆ ಮನೋಲ್ಲಾಸವನ್ನು ನೀಡುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಕ್ರೀಡೆಯಲ್ಲಿ ಸಾಕಷ್ಟು ಅವಕಾಶಗಳಿವೆ. ಆದ್ದರಿಂದ ಇಂದಿನ ಯುವಕರು ಕೆಟ್ಟ ಹವ್ಯಾಸಗಳಲ್ಲಿ ತೊಡಗಿಕೊಳ್ಳದೆ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ” ಎಂದರು.

ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಚಾರ್ಯರಾದ ಡಾ.ಎಂ. ಕೆ ವೀಣಾ ಅವರು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ. ಧನಂಜಯ ಕೆ. ಬಿ, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಶ್ವರಿ ಎನ್ , ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎನ್‌.ಡಿ ವಿರೂಪಾಕ್ಷ, ಪ್ರಾಧ್ಯಾಪಕರಾದ ಡಾ. ಕುಂದನ್ ಬಸವರಾಜ್, ಡಾ.ಮೇಟಿ ಮಲ್ಲಿಕಾರ್ಜುನ, ಡಾ.ಗಿರಿಧರ್ ಕೆ.ವಿ, ಪ್ರೊ. ರಮೇಶ್ ಬಾಬು, ಡಾ.ಟಿ. ಅವಿನಾಶ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕ್ರೀಡಾಕೂಟದ ನೇತೃತ್ವ ವಹಿಸಿರುವ ಡಾ. ಶಿವಮೂರ್ತಿ ಎ. ವಂದನಾರ್ಪಣೆ ಮಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...