ನಿತ್ಯವೂ ಮಕ್ಕಳಿಗೆ ಪೋಷಕರು ನೀತಿ ಕತೆಗಳನ್ನು ಹೇಳುವ ಮೂಲಕ ಎಳೆವಯಸ್ಸಿನಿಂದಲೇ ಅವರಿಗೆ ಸಂಸ್ಕಾರವನ್ನು ಕಲಿಸಬೇಕು ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ ಹೇಳಿದರು.
ಶಿವಮೊಗ್ಗ, ಕುವೆಂಪು ರಂಗಮಂದಿರದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಗೋಪಿಶೆಟ್ಟಿಕೊಪ್ಪ ಬಡಾವಣೆಯ ವಿದ್ಯಾವರ್ಧಕ ಶಾಲೆಯ 7ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಧಾರೆ ಎರೆಯುವ ಮೂಲಕ ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ಮಾಡಬೇಕು. ಮಕ್ಕಳಿಗಾಗಿ ಪೋಷಕರು ಒಂದಷ್ಟು ಸಮಯವನ್ನು ಮೀಸಲಿಟ್ಟರೆ, ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯವಿಶ್ವಾಸ್, ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಉಮೇಶ್, ನಿರ್ದೇಶಕ ಸುರೇಶ್, ಎಚ್.ಎಂ. ಹರಿಶ್ಚಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.