Monday, August 17, 2026
Monday, August 17, 2026

ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ಮಾಡಿ- ಡಾ‌.ಧನಂಜಯ ಸರ್ಜಿ

Date:

ನಿತ್ಯವೂ ಮಕ್ಕಳಿಗೆ ಪೋಷಕರು ನೀತಿ ಕತೆಗಳನ್ನು ಹೇಳುವ ಮೂಲಕ ಎಳೆವಯಸ್ಸಿನಿಂದಲೇ ಅವರಿಗೆ ಸಂಸ್ಕಾರವನ್ನು ಕಲಿಸಬೇಕು ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ.ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗ, ಕುವೆಂಪು ರಂಗಮಂದಿರದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಗೋಪಿಶೆಟ್ಟಿಕೊಪ್ಪ ಬಡಾವಣೆಯ ವಿದ್ಯಾವರ್ಧಕ ಶಾಲೆಯ 7ನೇ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರಿಗೆ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಧಾರೆ ಎರೆಯುವ ಮೂಲಕ ಮಕ್ಕಳನ್ನೇ ದೇಶದ ಆಸ್ತಿಯನ್ನಾಗಿ ಮಾಡಬೇಕು. ಮಕ್ಕಳಿಗಾಗಿ ಪೋಷಕರು ಒಂದಷ್ಟು ಸಮಯವನ್ನು ಮೀಸಲಿಟ್ಟರೆ, ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯವಿಶ್ವಾಸ್‌, ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್‌, ಖಜಾಂಚಿ ಉಮೇಶ್‌, ನಿರ್ದೇಶಕ ಸುರೇಶ್‌, ಎಚ್‌.ಎಂ. ಹರಿಶ್ಚಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...