Sunday, September 27, 2026
Sunday, September 27, 2026

ಕೋವಿಡ್ ಜಾಗೃತಿಯಾಗಿ ರೆಡ್ ಕ್ರಾಸ್ ನಿಂದ ಮಾಸ್ಕ್ ವಿತರಣೆ

Date:

ದೇಶದಲ್ಲಿ ಕೊರೋನಾ ಸೋಂಕಿನ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸುರಕ್ಷತೆ ದೃಷ್ಟಿಯಿಂದ ಮಂಗಳವಾರ ಚಿಕ್ಕಮಂಗಳೂರು, ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಗುಣಮಟ್ಟದ 4 ಸಾವಿರ ಉಚಿತ ಮಾಸ್ಕ್ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ, ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಆರ್. ಶ್ರೀನಿವಾಸ್ 2 ವರ್ಷಗಳ ನಂತರ ಮತ್ತೊಮ್ಮೆ ದೇಶದಲ್ಲಿ ಕೊರೋನಾ ಭೀತಿ ಎದುರಾಗುತ್ತಿರುವ ಕಾರಣ ಪ್ರತಿಯೊಬ್ಬರು ಸುರಕ್ಷತೆ ಹಾಗೂ ಮುಂಜಾಗ್ರತೆ ಕ್ರಮ ವಹಿಸುವ ನಿಟ್ಟಿನಲ್ಲಿ ಸಂಸ್ಥೆಯಿಂದ ಮೊದಲು ಕಾಲೇಜಿನಿಂದ ಮಾಸ್ಕ್ ವಿತರಣೆ ಕಾರ್ಯಕ್ರಮ ಪ್ರಾರಂಭಿಲಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ನಗರದ ಪ್ರಮುಖ ಸರ್ಕಾರಿ ಹಾಗೂ ಖಾಸಗೀ ಶಾಲೆಗಳಿಗೆ ಉಚಿತ ಮಾಸ್ಕ್ ವಿತರಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.

ಕಾರ್ಯದರ್ಶಿ ರಸೂಲ್ ಖಾನ್ ಮಾತನಾಡಿ ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ, ಪ್ರವಚನದಲ್ಲಿ ತೊಡಕಾಗಬಾರದೆಂಬ ದೃಷ್ಟಿಯಿಂದ ಮಾಸ್ಕ್ ವಿತರಿಸಲಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗಳು ಅಂತರವನ್ನು ಕಾಪಾಡಿಕೊಂಡು ಸುರಕ್ಷತೆ ಹೊಂದ ಬೇಕು ಎಂದು ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಪವನ್, ನಿರ್ದೇಶಕ ಕೋಟೆ ಸೋಮಣ್ಣ, ಯೂತ್ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ನಂಜೇಶ್, ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲ ರಾಜಣ್ಣ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...