ಕೃಷಿ ಮಂತ್ರಾಲಯದಿಂದ ಸಹಕಾರ ಮಂತ್ರಾಲಯವನ್ನು ಪ್ರತ್ಯೇಕಿಸಿ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮಾನ್ಯ ಪ್ರಧಾನಮಂತ್ರಿಗಳು ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಭಾರತ ಸರ್ಕಾರದ ಸಹಕಾರ ಹಾಗೂ ಗೃಹ ಇಲಾಖೆ ಸಚಿವರಾದ ಅಮಿತ್ ಶಾ ಅವರು ತಿಳಿಸಿದರು.
ಅವರು ಮಂಡ್ಯ ಜಿಲ್ಲೆಯ ಗೆಜ್ಹಲಗೆರೆಯಲ್ಲಿ 260.90 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೈರಿ ಉದ್ಘಟಿಸಿ ಮಾತನಾಡಿದರು. ಭಾರತ ಸರ್ಕಾರ ಯಾವುದೇ ಕಾರಣಕ್ಕೂ ಸಹಕಾರ ಇಲಾಖೆ ಸದಸ್ಯರಿಗೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಮೆಗಾ ಡೈರಿಯಲ್ಲಿ 73 ಕೋಟಿ ಕಟ್ಟಡ ನಿರ್ಮಾಣ,183 ಕೋಟಿ ಯಂತ್ರೋಪಕರಣಗಳಿಗೆ ವೆಚ್ಚ ಮಾಡಲಾಗಿದೆ. ಇಲ್ಲಿ 10 ಲಕ್ಷ ಲೀಟರ್ ಹಾಲನ್ನು ಸಂಸ್ಕರಿಸುವ ವ್ಯವಸ್ಥೆ ಇದೆ. ಮುಂದಿನ ದಿನಗಳಲ್ಲಿ 14 ಲಕ್ಷ ಲೀಟರ್ ಹಾಲನ್ನು ಸಂಸ್ಕರಿಸುವ ರೀತಿ ಉನ್ನತೀಕರಿಸಲಾಗುವುದು. ಹಾಲನ್ನು ಸಂಸ್ಕರಿಸುವುದರಿಂದ ಬಹಳಷ್ಟು ರೈತರು ಆರ್ಥಿಕವಾಗಿ ಸದೃಢರಾಗಿದ್ದಾರೆ ಎಂದರು.
ಕರ್ನಾಟಕ ರಾಜ್ಯದಲ್ಲಿ ಹಾಲು ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.15210 ಗ್ರಾಮ ಮಟ್ಟದ ಹಾಲು ಸಹಕಾರ ಸಂಘಗಳಿವೆ 22 ಲಕ್ಷದ 22 ಸಾವಿರ ರೈತರು ಇದರಲ್ಲಿ ಭಾಗವಹಿಸುತ್ತಿದ್ದಾರೆ. 1975 ರಿಂದ 2022 ರವರೆಗೆ ಕರ್ನಾಟಕ ರಾಜ್ಯ ಡೈರಿ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ಮಾಡಿದೆ. 1975 ರಲ್ಲಿ
66 ಸಾವಿರ ಕಿಲೋ ಲೀಟರ್ ಹಾಲು ಸಂಸ್ಕರಿಸಲಾಗುತ್ತಿತ್ತು ಇಂದು 82 ಲಕ್ಷ ಕಿಲೋ ಲೀಟರ್ ಹಾಲು ಪ್ರತಿ ದಿನ ಸಂಸ್ಕರಿಸಲಾಗುತ್ತಿದೆ. ಮಿಲ್ಕ್ ಫೆಡರೇಷನ್ ನ ಟನ್೯ ಓವರ್ 4 ಕೋಟಿ ಇದ್ದದ್ದು, ಇಂದು 25 ಸಾವಿರ ಕೋಟಿ ತಲುಪಿದೆ ಎಂದರು.
ಹಾಲು ಉತ್ಪಾದಕರ ಸಂಘದ ಗಳಿಕೆಯ ಶೇ 80% ರಷ್ಟು ರೈತರಿಗೆ ನೀಡಲಾಗುತ್ತಿದೆ .ಗುಜರಾತ್ ಕ್ಷೀರ ಕ್ರಾಂತಿಯಲ್ಲಿ ಮುಂಚೂಣಿಯಲ್ಲಿದೆ. ಅಮೂಲ್ ಹಾಗೂ ನಂದಿನಿ ಎರೆಡೂ ಒಗ್ಗೂಡಿ ಕೆಲಸ ಮಾಡಿದರೆ ಕೆಲವೇ ವರ್ಷಗಳ ಪ್ರತಿ ಹಳ್ಳಿಯಲ್ಲಿ ಪ್ರಾಥಮಿಕ ಡೈರಿ ಸ್ಥಾಪನೆ ಸಾಧ್ಯ ಎಂದರು..
ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತ ಬಂಧುಗಳು ಶ್ರಮಿಸುತ್ತಿದ್ದಾರೆ. ಹಾಲು ಉತ್ಪಾದನೆ ಮಾಡುವ ರೈತ ಮಹಿಳೆಯರಿಗೆ ವಿಶೇಷವಾಗಿ ಮುಖ್ಯ ಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.
ಸಮಗ್ರ ಕೃಷಿ ಯಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಅದಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕರ್ನಾಟಕದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲದಲ್ಲಿ ಪ್ರೋತ್ಸಾಹ ಧನ ನೀಡುವುದು ಪ್ರಾರಂಭವಾಗಿ ಇಂದು 5.00 ರೂ.ಗಳನ್ನು ಪ್ರತಿ ಹಾಲು ಉತ್ಪಾದಕನಿಗೆ ನೀಡಲಾಗುತ್ತಿದೆ.