ಶಿವಮೊಗ್ಗ: ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಯುಕ್ತ ಚುನಾವಣಾ ಆಯೋಗದ ನಿರ್ದೇಶನದಂತೆ 2022-23ನೇ ಸಾಲಿನ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿಡಿಯೋ ಕಾನ್ಫ್‍ರೆನ್ಸ್ ಮೂಲಕ ರಾಜ್ಯ ಮಟ್ಟದಲ್ಲಿ ಕನ್ನಡ ಪ್ರಬಂಧ ಸ್ಪರ್ಧೆ, ಇಂಗ್ಲೀಷ್ ಪ್ರಬಂಧ ಸ್ಪರ್ಧೆ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಪ್ರೌಢ ಶಾಲಾ ವಿಭಾಗದಿಂದ ತಲಾ ಮೂರು ವಿದ್ಯಾರ್ಥಿಗಳು ಪದವಿ ಪೂರ್ವ ವಿಭಾಗದಿಂದ ತಲಾ 3 ವಿದ್ಯಾರ್ಥಿಗಳು ಹಾಗೂ ಪದವಿ ವಿಭಾಗದಿಂದ ಮೂರು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕನ್ನಡ ಪ್ರಬಂಧ ಸ್ಪರ್ಧೆ, ಇಂಗ್ಲೀಷ್ ಪ್ರಬಂಧ ಸ್ಪರ್ಧೆ ಹಾಗೂ ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳನ್ನು ಜಿಲ್ಲಾ ಪಂಚಾಯತಿಯ ಕಛೇರಿಯ ಕೆ-ಸ್ವಾನ್ ಕೊಠಡಿಯಲ್ಲಿ ನಡೆಸಲಾಗಿತ್ತು.
ಈ ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಡಿ. ಪ್ರಕಾಶ್‍ರವರು ಪ್ರೋತ್ಸಾಹಿಸಿ ಶುಭಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ನವೀನ ಕುಮಾರ್ ಮತ್ತು ಜಿಲ್ಲಾ ಉಪ ಸ್ವಿಪ್ ನೋಡಲ್ ಅಧಿಕಾರಿ ನವೀದ್ ಅಹಮದ್ ಫರ್ವಿಜ್, ಡಯಟ್‍ನ ಉಪನ್ಯಾಸಕ ರಾಜೀವ್ ಹಾಗೂ ಪದವಿ ವಿಭಾಗದ ನೋಡಲ್ ಅಧಿಕಾರಿಯಾದ ಎಂ.ಸಿ ರಾಜಕುಮಾರ್, ಮಂಜುಳ ವಿಶೇಷ ಅಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಛೇರಿ ವಿಷಯ ಪರಿವೀಕ್ಷಕರಾದ ಶಿವನೆಗೌಡ ಹಾಗೂ ಪದವಿ ಪೂರ್ವ ವಿಭಾಗದಿಂದ ಮಾಲತೇಶ್, ಕುಂಸಿ ಪಿ.ಯು.ಕಾಲೇಜಿನ ಪ್ರಾಂಶುಪಾಲ ಅರವಿಂದ್ ಇತರರು ಉಪಸ್ಥಿತರಿದ್ದರು.