2023-24 ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್,
ಶ್ರೀ ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
2022-23 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 10ನೇ ತರಗತಿವರೆಗೆ ಉಚಿತ ವಸತಿ, ಊಟ ಮತ್ತು ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುವುದು.
ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಜಿಲ್ಲೆಯ ಯಾವುದಾದರೂ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀ ನಾರಾಯಣ ಗುರು ವಸತಿ ಶಾಲೆ/ಕಾಲೇಜುಗಳ ಮೂಲಕ ಆನ್‍ಲೈನ್‍ನಲ್ಲಿ ದಿ: 22-02-2023 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಶಿವಮೊಗ್ಗದ ಪ್ರಾಂಶುಪಾಲರು ಮೊ ಸಂ: 9886897594, ಭದ್ರಾವತಿ 9482696819, ತೀರ್ಥಹಳ್ಳಿ 9481078559, ಶಿಕಾರಿಪುರ 9901325156, ಸೊರಬ 9740934526, ಸಾಗರ 9901699650, ಹೊಸನಗರ 9620793267 ನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
