2022-23 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಹಾಗೂ ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ದಿನಾಂಕ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.
ದಿನಾಂಕ: 20-01-2023 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿ ನಿಗದಿಗೊಳಿಸಿದ್ದು ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆಗೊಳಿಸಲು ಮನವಿ ಬಂದ ಹಿನ್ನೆಲೆ ಅರ್ಜಿ ಅವಧಿ ವಿಸ್ತರಿಸಲಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಸಲು ವೆಬ್‍ಸೈಟ್ www.//ssp.postmatric.karnataka.gov.in, ಸರ್ಕಾರಿ ಆದೇಶ ಮತ್ತು ಇತರೆ ಮಾಹಿತಿಗೆ https://bcwd.karnataka.gov.in, ಹೆಚ್ಚಿನ ಮಾಹಿತಿಗೆ ಇಲಾಖೆಯ ಸಹಾಯವಾಣಿ ಸಂಖ್ಯೆ : 8050770005/08182-222129 ಇಮೇಲ್ bcwdhelpline@gmail.com, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಇಮೇಲ್ postmatrichelp@karnataka.gov.in ಮತ್ತು ಸಹಾಯವಾಣಿ 080-35254757 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
