ಕಳಸ: ಮಹಿಳೆಯರು ಜೀವನದಲ್ಲಿ ಸಿಗುವ ಅವಕಾಶವನ್ನು ಸದುಪಯೋಗಪಡಿಸಿ ಕೊಂಡು ಮುಂಬರುವ ದಿನಗಳಲ್ಲಿ ಹೆಚ್ಚು ಅಧ್ಯಯನ ನಡೆಸಿ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಸಹಾಯಕ ಸಬ್ ಇನ್ಸ್ಪೆಕ್ಟರ್ ಡಾ. ಸಿ.ಆರ್.ಮೋಹನ್‌ಕುಮಾರ್ ಅವರು ಹೇಳಿದರು.
ಶ್ರೀ ಕ್ಷೇತ್ರ‍್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಮಹಿಳಾ ಜ್ಞಾನ ವಿಕಾಸ ಅಡಿಯಲ್ಲಿ ಪಟ್ಟಣದ ಕಳಸ ಪೊಲೀಸ್ ಠಾಣೆ ಆವರಣದಲ್ಲಿ ಮಹಿಳಾ ಅಧ್ಯಯನ ಪ್ರವಾಸ ಕಾರ್ಯಕ್ರಮವನ್ನು ಮಂಗಳವಾರ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಪೊಲೀಸ್ ಇಲಾಖೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಜನ ಸ್ನೇಹಿ ವ್ಯವಸ್ಥೆ, ಬೀಟ್, ಮಹಿಳಾ ಕಾನೂನು, 112ರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಮಹಿಳೆಯರು ಪುರುಷರಂತೆ ಸಮಾನ ವೆಂಬ ಭಾವನೆ ಬೆಳೆಸಿಕೊಂಡು ಉತ್ತಮ ಸಾಧನೆ ಬಗ್ಗೆ ಗಮನ ಹರಿಸಬೇಕು ಎಂದರು.
ಮಹಿಳಾ ಜ್ಞಾನ ವಿಕಾಸ ಮೆಲ್ವಿಚಾರಕಿ ರಂಜಿತಾ ಮಾತನಾಡಿ ಮಹಿಳಾ ಸಬಲೀಕರಣ ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮಹಿಳೆ ಪ್ರಗತಿ ಸಾಧಿಸಿದಾಗ ಮಾತ್ರ ಸಬಲರಾಗಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಪ್ರೇರಣಾ, ಪ್ರೇಮ, ಹೇಮಾವತಿ ಸ್ನೇಹ, ಪ್ರಕೃತಿ, ಸಾವಿತ್ರಿ ಜಾನಕಿ, ಭಾರತಿ, ಸುಮಿತ್ರ, ಮಾಲತಿ ಹಾಗೂ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಮತ್ತಿತರರಿದ್ದರು.