ಶಿವಮೊಗ್ಗ: ಭಾರತ ಸರ್ಕಾರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಇವರ ವತಿಯಿಂದ 2022-23 ನೇ ಸಾಲಿನ ಯುವ ನಾಯಕತ್ವ ಮತ್ತು ಸಮುದಾಯ ಅಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಶಿವಮೊಗ್ಗದ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ನಾಯಕತ್ವ ಗುಣ ಬೆಳೆಸಿಕೊಳ್ಳಲು ಮಾತನಾಡುವ ಮತ್ತು ಎಲ್ಲರ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಗುಣಗಳನ್ನು ಬೆಳೆಸಿಕೊಳ್ಳಬೇಕು. ನಾಯಕರಾಗುವವರು ಅಧಿಕಾರಕ್ಕೆ ಆಸೆ ಪಡದೆ ಗಾಂಧೀಜಿಯವರಂತೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ತಿಳಿಸಿದರು.
ಈ ತರಬೇತಿಯನ್ನು 45 ಯುವಜನರಿಗೆ ನೀಡಲಾಗುತ್ತಿದೆ. ಯುವಜನತೆಯಲ್ಲಿ ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯಗಳು, ನಾಯಕತ್ವದ ಗುಣ, ಸಮಾಜಸೇವೆ, ದೇಶಭಕ್ತಿಯ ಮೌಲ್ಯಗಳು ಮತ್ತು ವೃತ್ತಿಯೋಜನೆ ವಿಷಯಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ.
ಕಾರ್ಯಕರಮದಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ರವೀಂದ್ರ ಚಂದ್ರಾನಾಯ್ಕ್, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರೊಫೆಸರ್ ಮತ್ತು ಪಾತ್‍ವೇಸ್‍ನ ನಿರ್ದೇಶಕ ಡಾ.ಸಿ.ಕೆ.ರಮೇಶ್, ಕುವೆಂಪು ವಿವಿ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ.ನಾಗರಾಜ್ ಪರಿಸರ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಕೆಟಿಕೆ, ಲೆಕ್ಕಾಧಿಕಾರಿ ರಮೇಶ್ ಹಾಜರಿದ್ದರು.