Tuesday, March 24, 2026
Tuesday, March 24, 2026

ಶಿವಮೊಗ್ಗದಲ್ಲಿ ಶ್ರೀಬಾಲ ಗಂಗಾಧರನಾಥ ಸ್ವಾಮೀಜಿ ಸಂಸ್ಮರಣಾ ಮಹೋತ್ಸವ

Date:

ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 71ನೇ ಪೀಠಾಧ್ಯಕ್ಷರಾಗಿ ಸಿದ್ಧ ಸಿಂಹಾಸನಾರೋಹಣ ಮಾಡಿದಂತಹ ಪರಮಪೂಜ್ಯ ಯುಗ ಯೋಗಿ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾ ಸ್ವಾಮಿಗಳವರು ಜನಸಾಮಾನ್ಯರ ಉದ್ಧಾರಕ್ಕಾಗಿ ಅನ್ನ, ಅಕ್ಷರ, ಆರೋಗ್ಯ, ಆಶ್ರಯ, ಆಕಳು, ಪರಿಸರ ಮುಂತಾದ ಕ್ಷೇತ್ರಗಳಲ್ಲಿ ಆಂದೋಲನವನ್ನೇ ಮಾಡಿದರು. ಶೈಕ್ಷಣಿಕ, ಧಾರ್ಮಿಕ ಹಾಗೂ ಸಮಾಜ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸಿದ್ದಾರೆ.

ಪರಮ ಪೂಜ್ಯರ ಅವಿಶ್ರಾಂತ ಕಾಯಕದ ಫಲವಾಗಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಅಡಿಯಲ್ಲಿ 475 ಕ್ಕೂ ಹೆಚ್ಚಿನ ವಿದ್ಯಾಸಂಸ್ಥೆಗಳು ಸ್ಥಾಪನೆಗೊಂಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಒಂದು ಲಕ್ಷದ ಹತ್ತು ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪೂರ್ವ ಪ್ರಾಥಮಿಕ ಶಾಲೆಯಿಂದ ಸಂಸ್ಕೃತ ವೇದಾಗಮ ಹಾಗೂ ತಾಂತ್ರಿಕ, ವೈದ್ಯಕೀಯ ವಿಜ್ಞಾನದ ವರಗೆ ಯಾವುದೇ ಜಾತಿ, ಮತ, ಲಿಂಗ ಭೇದ ವಿಲ್ಲದೆ ವ್ಯಾಸಂಗ ಮಾಡುತ್ತಿದ್ದಾರೆ. ಶ್ರೀ ಮಠದ ವತಿಯಿಂದ ವಿವಿಧ ಕಾರ್ಯಕ್ರಮಗಳು ಜನವರಿ 12 ರಿಂದ 18ರ ವರೆಗೆ 10ನೇ ಸಂಸ್ಮರಣಾ ಮಹೋತ್ಸವ ನಡೆಯಲಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ವಹಿಸಲಿದೆ.

ಜ. 12 ರಂದು ರೈತರ ಸಮಾವೇಶ,13 ರಂದು ಹೋಮ, ಹವನಾದಿ ಧಾರ್ಮಿಕ ಕಾರ್ಯಕ್ರಮ,14 ರಂದು ಹಿರಿಯ ವಿದ್ಯಾರ್ಥಿಗಳ ವೇದಿಕೆ ಸಮಾರಂಭ,15 ರಂದು ಮಕ್ಕಳ ಸಾಹಿತ್ಯ ಸಮ್ಮೇಳನ,16 ರಂದು ಕುವೆಂಪು ಸಾಹಿತ್ಯ ದರ್ಶನ, 17 ರಂದು ರಾಜ್ಯಮಟ್ಟದ ಚುಂಚಾದ್ರಿ ಮಹಿಳಾ ಸಮಾವೇಶ, ಹಾಗೂ 18 ರಂದು ಜಯಂತ್ಯುತ್ಸವ ಹಾಗೂ ಸಂತ ಭಕ್ತ – ಸಂಗಮ ನಡೆಯಲಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು...

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ...

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...