Thursday, September 17, 2026
Thursday, September 17, 2026

ಫೆಬ್ರವರಿ12 ರಂದು ಪ್ರಧಾನಿ ಮೋದಿ ಅವರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ಲೋಕಾರ್ಪಣೆ?

Date:

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಮುಂದಿನ ತಿಂಗಳು ಫೆ. 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದ್ದಾರೆ.

ಶಿವಮೊಗ್ಗದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಮತ್ತು ಭೂಮಿಪೂಜೆ ಸಮಾರಂಭವನ್ನು ಉದ್ಘಾಟಿಸಿ ಬಿವೈ ರಾಘವೇಂದ್ರ ಅವರು ಮಾತನಾಡಿದರು.

ವಿಮಾನ ನಿಲ್ದಾಣದ ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಜಂಗಮ ಸಮಾಜ ಪವಿತ್ರವಾದುದು. ದೇವರಿಗೆ ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜ ಕೆಲಸ ಮಾಡುತ್ತಿದೆ. ದೇವರನ್ನು ಹತ್ತಿರದಿಂದ ಕಾಣಲು ಗುರುಗಳಿಗೆ ಬಿಟ್ಟರೆ, ಜಂಗಮ ಸಮಾಜಕ್ಕೆ ಶಕ್ತಿ ಇದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ ರೂತ1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರವೇ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...