Tuesday, April 22, 2025
Tuesday, April 22, 2025

ಫೆಬ್ರವರಿ 11 ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ ಲೋಕ ಅದಾಲತ್

Date:

ಫೆಬ್ರವರಿ 11 ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಸಿವಿಲ್ ಪ್ರಕರಣಗಳು, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲಾಗುವುದು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದ ಮೇರೆಗೆ 11.02.2023 ರಂದು ಜಿಲ್ಲೆಯಲ್ಲಿ ಲೋಕ್ ಅದಾಲತ್ ನಡೆಯಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು.

ಈ ಲೋಕ್ ಅದಾಲತ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ
ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್ ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ವಿನೀತ ಶರ್ಮ ವಿರುದ್ಧ ರಾಕೇಶ್ ಶರ್ಮ ಮತ್ತು ಇತರರು ಪ್ರಕರಣದಲ್ಲಿ 2020 ರ ಆಗಸ್ಟ್ 11 ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲಿರುವ ಕುರಿತು ಹಾಗೂ ವಿಭಜನಾ ಪ್ರಕರಣಗಳು ಮತ್ತು ಇತರೆ ಪ್ರಕರಣಗಳನ್ನು ಗುರುತಿಸಿ, ಈ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು.

ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ನ್ಯಾಯಾಲಯಕ್ಕೆ ಬರುವಂತಹ ಇತರೆ ಪ್ರಕರಣಗಳನ್ನು ಪೂರ್ವ ವ್ಯಾಜ್ಯಗಳೆಂದು ಪರಿಗಣಿಸಿ, ಅವುಗಳಲ್ಲಿ ಉಭಯ ಕಕ್ಷಿದಾರರನ್ನು ಕರೆಸಿ ರಾಜೀ ಸಂಧಾನದ ಮೂಲಕ ವಿವಾದವನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು.

ಈ ಅವಾರ್ಡ್‌ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ಕಿ ಇದ್ದಂತೆ, ಅಂತಹ ಅವಾಡ್‌ರ್ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್‌ಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ.

ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ
ನ್ಯಾಯದಾನವಾಗುತ್ತದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆಯ ಉಪಯೋಗ ಪಡೆದಕೊಳ್ಳಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜಣ್ಣ ಸಂಕಣ್ಣನವರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dr. Raj Kumar ಡಾ.ರಾಜ್ ಅಭಿನಯದ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ

Dr. Raj Kumar ವರನಟ ಡಾ ರಾಜ್ ಕುಮಾರ್ ರವರ ಜನ್ಮದಿನಾಚರಣೆ...

S.N.Chennabasappa ಜನಿವಾರ ತೆಗೆಸಿದ ಪ್ರಕರಣ, ಘಟನೆ‌ಮುಂದೆ ತಪ್ಪಿಸಲು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ವಿಪ್ರ ಸಂಘಟನೆಯ ಮನವಿ

S.N.Chennabasappa ಶಿವಮೊಗ್ಗದ ದುರ್ಗಿಗುಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಜಿಲ್ಲಾಧಿಕಾರಿ...

Mathura Paradise ಏಪ್ರಿಲ್ 22, ಶಿವಮೊಗ್ಗದಲ್ಲಿ “ಹೋಟೆಲ್ ಉದ್ಯಮದಲ್ಲಿ ಹೊಸ ಪ್ರವೃತ್ತಿಗಳು” ಸಂವಾದ ಕಾರ್ಯಕ್ರಮ

Mathura Paradise ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಶಿವಮೊಗ್ಗ ಹೋಟೆಲ್...

Department of Animal Husbandry and Veterinary Services ಏಪ್ರಿಲ್ 21 ರಿಂದ ಜೂನ್ 4 ವರೆಗೆ ಜಾನುವಾರು ಲಸಿಕೆ ಅಭಿಯಾನ

Department of Animal Husbandry and Veterinary Services ಶಿವಮೊಗ್ಗ ಜಿಲ್ಲೆಯಲ್ಲಿ...