ಶಿವಮೊಗ್ಗ: ಜ.28 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ ಸೂಚನೆ ನೀಡಿದರು.
ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಪೂರ್ವಭಾವಿಯಾಗಿ ಚರ್ಚಿಸಲು ತಾಲ್ಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜ.28 ರಂದು ತಾಲ್ಲೂಕಿನ ಹೊಳಲೂರು ಗ್ರಾಮದ ಮಾರುತಿ ಪ್ರೌಢಶಾಲೆಯ ಆವರಣದಲ್ಲಿ ಬೆಳಿಗ್ಗೆ 11 ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾಗಲಿದೆ. ತಾಲ್ಲೂಕು ಕಚೇರಿ ವ್ಯಾಪ್ತಿಯ 41 ಇಲಾಖೆಗಳಿಗೆ ಈಗಾಗಲೇ ಸಿದ್ದತೆ ಕುರಿತು ಮಾಹಿತಿ ನೀಡಲಾಗಿದೆ. ಅವಶ್ಯಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರಿಗೆ ಸೂಕ್ತ ಆಸನ ವ್ಯವಸ್ಥೆ ಮಾಡಿ, ಆದೇಶಗಳ ಸುಗಮ ವಿತರಣೆಗೆ ಸೂಕ್ತ ಸಿದ್ದತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಶಿವಮೊಗ್ಗದ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದೆ. ಎಲ್ಲ ಇಲಾಖೆಗಳು, ನಿಗಮಗಳು ತಮ್ಮ ತಮ್ಮ ವ್ಯಾಪ್ತಿಯ ಫಲಾನುಭವಿಗಳ ಪಟ್ಟಿ ತಯಾರಿಸಿ, ಕಾರ್ಯಕ್ರಮದ ಸಮರ್ಪಕ ಆಯೋಜನೆಗೆ ಸೂಕ್ತ ವ್ಯವಸ್ಥೆ ಮತ್ತು ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಮತ್ತು ಅಂದು ಇಲಾಖೆಗಳಿಂದ ಲಭ್ಯವಾಗುವ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿತೆ ಒದಗಿಸುವ ವಿವಿಧ 14 ಮಳಿಗೆಗಳನ್ನು ತೆರೆಯಲು ಸೂಚನೆ ನೀಡಿರುವನ್ವಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಆರಕ್ಷಕ ಇಲಾಖೆಯವರು ಪೂರ್ವಭಾವಿಯಾಗಿ ಸ್ಥಳ ಪರಿಶೀಲನೆ ನಡೆಸಿ, ವಾಹನಗಳ ಪಾರ್ಕಿಂಗ್, ಸುಗಮ ಸಂಚಾರ ಹಾಗೂ ಇತರೆ ಸುರಕ್ಷತಾ ವ್ಯವಸ್ಥೆಯ ಅಚ್ಚುಕಟ್ಟು ನಿರ್ವಹಣೆ ಕುರಿತು ಕ್ರಮ ಕೈಗೊಳ್ಳಬೇಕೆಂದರು.
ಸಭೆಯಲ್ಲಿ ಡಿವೈಎಸ್‍ಪಿ ಸುರೇಶ್, ಉಪ ತಹಶೀಲ್ದಾರ್ ಗಣೇಶ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
rtisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.