ಶಿವಮೊಗ್ಗ:
ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ದಿನಾಂಕ: 30-12-2022 ಮತ್ತು 17-01-2023 ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಪ್ರೌಢಶಾಲಾ ವಿಭಾಗದ ರಸಪ್ರಶ್ನೆ ಸ್ಪರ್ಧೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೇರಿಯ ಸರ್ಕಾರಿ ಪ್ರೌಢಶಾಲೆಯ ಶ್ರೀರಾಂ ಭಟ್ ಹೆಚ್.ಎಸ್ ಹಾಗೂ ಅಭಿಜ್ಞ ಓ.ಎ ಇವರು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಶಿವಮೊಗ್ಗದ ಕಸ್ತೂರಿಬಾ ಪಿಯು ಕಾಲೇಜಿನ ಅರ್ಫಾ ರೀಮ್ ತಾಜ್ ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಚಂದನ ಹೊಸೂರ್ ಇವರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿವಿಧ ಸ್ಪರ್ಧೆಗಳಲ್ಲಿ ಸ್ಥಾನ ಗಳಿಸಿ ಜಿಲ್ಲೆಗೆ ಹೆಮ್ಮೆ ತಂದಿರುವ ಈ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿ.ಪಂ ಸಿಇಓ ಎನ್.ಡಿ.ಪ್ರಕಾಶ್, ಸ್ವೀಪ್ ನೋಡಲ್ ಅಧಿಕಾರಿ ನವೀನ್ ಕುಮಾರ್, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ನವೀದ್ ಅಹ್ಮದ್, ಡಿಡಿಪಿಯು ಕೃಷ್ಣಪ್ಪ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಇವರು ಅಭಿನಂದನೆ ಸಲ್ಲಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.