Tuesday, October 1, 2024
Tuesday, October 1, 2024

ಭದ್ರಾವತಿ ವಿಐಎಸ್ಎಲ್ ನಲ್ಲಿ ಗಣರಾಜ್ಯೋತ್ಸವ

Date:

ವಿಐಎಸ್‌ಎಲ್‌ನಲ್ಲಿ ಗಣರಾಜ್ಯೋತ್ಸವ ದಿನಾಚರಣೆ
ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ 26ನೇ ಜನವರಿ 2023ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಪಾಲಕ ನಿರ್ದೇಶಕರಾದ ಶ್ರೀಯುತ ಬಿ.ಎಲ್. ಚಂದ್ವಾನಿ ಅವರು ರಾಷ್ಟçಧ್ವಜಾರೋಹಣ ಮಾಡಿದರು.
ವಿಐಎಸ್‌ಎಲ್ ಸೆಕ್ಯುರಿಟಿ, ಹೋಮ್ ಗಾರ್ಡ್ಸ್, ಎನ್.ಸಿ.ಸಿ, ಹೈಸ್ಕೂಲ್ ಮತ್ತು ಪ್ರೈಮರಿ ಸ್ಕೂಲ್ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಬಾಲಭಾರತಿ ಶಾಲೆ, ಸೆಂಟ್ ಚಾರ್ಲ್ಸ್ ಶಾಲೆ, ಪೇಪರ್ ಟೌನ್ ಇಂಗ್ಲೀಷ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಏಕೀಕರಣ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿದರು.

ವಿಐಎಸ್‌ಎಲ್ ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ವಿಶೇಷ ಪ್ರಶಸ್ತಿ, ಜವಹಾರ್ ನೆಹರು ಮತ್ತು ಡಾ|| ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ವಿತರಿಸಲಾಯಿತು. ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ತಂಡಗಳಿಗೆ ಹಾಗೂ ಮಿಕ್ಕ ಎಲ್ಲಾ ಪಥಸಂಚಲನ ತಂಡಗಳಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.

ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್‌ಎಲ್ ಅಧಿಕಾರಿಗಳ ಸಂಘ, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದದವರು, ಭದ್ರಾವತಿಯ ನಾಗರೀಕರು ಕಾಯಕ್ರಮದಲ್ಲಿ ಭಾಗವಹಿಸಿದ್ದರು.

ಶ್ರೀ ಇಳಯರಾಜ, ಸಹಾಯಕ ಮಹಾಪ್ರಬಂಧಕರು (ಹಣಕಾಸು) ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಕಾರ್ಯಕ್ರಮದ ಸಂಯೋಜನೆಯನ್ನು ಸಾರ್ವಜನಿಕ ಸಂಪರ್ಕ, ನಗರಾಡಳಿತ ಮತ್ತು ರಕ್ಷಣಾ ವಿಭಾಗದವರು ಮಾಡಿದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...