Monday, August 3, 2026
Monday, August 3, 2026

ರಾಜಾಕಾಲುವೆಯಿಂದ ಸ್ವಂತ ಮನೆಗೆ ಹಾನಿ ಸರಿಪಡಿಸಲು ನಿವಾಸಿಯಿಂದ ಸತ್ಯಾಗ್ರಹ

Date:

ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ತಾಲ್ಲೂಕಿನ ಮಂಟಘಟ್ಟ ಗ್ರಾಮ ಪಂಚಾಯ್ತಿ ಕಚೇರಿ ಎದುರು ಗ್ರಾಮದ ನಿವಾಸಿ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಉಮೇಶ್ ಅವರು ಕಳೆದ ನಾಲ್ಕು ವರ್ಷಗಳಿಂದ ರಾಜ ಕಾಲುವೆ ಒತ್ತುವರಿಯಾಗಿರುವುದರಿಂದ ತಮ್ಮ ಮನೆಗೆ ಮಳೆ ನೀರು ನುಗ್ಗುತ್ತಿದೆ. ಇದರಿಂದ ತಮಗೆ ಪ್ರತಿ ವರ್ಷ ಸಂಕಷ್ಟ ಎದುರಾಗುತ್ತಿದೆ. ಈ ಬಗ್ಗೆ 4 ವರ್ಷಗಳಿಂದಲೂ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಇದರಿಂದಾಗಿ ಪ್ರತಿ ವರ್ಷ ಮಳೆಗಾಲದಲ್ಲಿ ಏನಾಗುವುದೋ ಎಂಬ ಆತಂಕದಲ್ಲೇ ದಿನ ದೂಡಬೇಕಿದೆ. ಗ್ರಾಮ ಪಂಚಾಯ್ತಿ ಆಡಳಿತದ ನಿರ್ಲಕ್ಷ್ಯದಿಂದಾಗಿ ನಾನು ಮತ್ತು ನನ್ನ ಕುಟುಂಬದವರು ನೊಂದಿದ್ದೇವೆ. ಅನ್ಯಾಯವನ್ನು ಸರಿಪಡಿಸುವಂತೆ ಡಿಸೆಂಬರ್ 26ರಂದು ಉಪವಾಸ ಸತ್ಯಾಗ್ರಹ ಕುಳಿತಿದ್ದಾಗ ತಾಲ್ಲೂಕು ಪಂಚಾಯ್ತಿ ಮುಖ್ಯಾಧಿಕಾರಿ ಅವಿನಾಶ್ ಅವರು ಒಂದು ತಿಂಗಳಲ್ಲಿ ಕಾಲುವೆ ಒತ್ತುವರಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ, ಒಂದು ತಿಂಗಳ ಗಡುವು ಮುಗಿದರೂ ಸಮಸ್ಯೆ ಬಗೆಹರಿದಿಲ್ಲ.
ಆದರೆ, ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬದಲು ಮತ್ತಷ್ಟು ಜಟಿಲಗೊಳಿಸುತ್ತಿದ್ದಾರೆ ಎಂದು ಉಮೇಶ್ ಆರೋಪಿಸಿದರಲ್ಲದೇ, ಸಮಸ್ಯೆಯನ್ನು ಸರಿಪಡಿಸುವವರೆಗೂ ಉಪವಾಸ ಧರಣಿ ಕೈಬಿಡುವುದಿಲ್ಲ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...