Thursday, March 26, 2026
Thursday, March 26, 2026

ಶಿವಮೊಗ್ಗ ಮತ್ತು ಅಂಡಮಾನ್ ಚೇಂಬರ್ ಆಫ್ ಕಾಮರ್ಸ್ ನಡುವೆ ಒಡಂಬಡಿಕೆಗೆ ಸಿದ್ಧ-ಕುಲ್ ದೀಪ್ ರಾಯ್ ಶರ್ಮ

Date:

ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯ ನಡೆಸಲಾಗುವುದು ಎಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಲೋಕಸಭಾ ಸದಸ್ಯ ಕುಲದೀಪ್ ರಾಯ್ ಶರ್ಮ ಹೇಳಿದರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಕ್ಕೆ ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ಆಯೋಜಿಸಿದ್ದ ಅಂಡಮಾನ್ ಪ್ರವಾಸದಲ್ಲಿ ಭಾಗವಹಿಸಿದ್ದ ಪ್ರವಾಸಿಗರ ತಂಡವನ್ನು ಭೇಟಿ ಮಾಡಿ ಮಾತನಾಡಿದರು.

ಅಂಡಮಾನ್ ಕ್ಷೇತ್ರದ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಕೇಂದ್ರ ಸರ್ಕಾರ ಈಗಾಗಲೇ 90 ಸಾವಿರ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಇದರಿಂದ ಪ್ರಸ್ತುತ ಚಿತ್ರಣವೇ ಬದಲಾಗಲಿದ್ದು, ಎಲ್ಲ ರೀತಿಯ ಆಧುನಿಕ ಸೌಲಭ್ಯಗಳೊಂದಿಗೆ ಪ್ರವಾಸಿ ಕ್ಷೇತ್ರಗಳ ಅಭಿವೃದ್ಧಿಯಾಗಲಿದೆ ಎಂದರು.

ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಜತೆಯಲ್ಲಿ ಅಂಡಮಾನ್ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ( ಎಂಒಯು ) ಸಹಿ ಮಾಡಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಜಂಟಿಯಾಗಿ ಅನುಷ್ಠಾನಗೊಳಿಸುವ ಕಾರ್ಯಯೋಜನೆ ನಡೆಸುವುದಾಗಿ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯು ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದ್ದು, ಪ್ರವಾಸೋದ್ಯಮ ಕ್ಷೇತ್ರಕ್ಕೂ ಹೆಚ್ಚಿನ ಅವಕಾಶಗಳಿವೆ.

ಮುಂದಿನ ದಿನಗಳಲ್ಲಿ ಪರಸ್ಪರ ಸಹಯೋಗದೊಂದಿಗೆ ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಶೀಘ್ರದಲ್ಲೇ ಲೋಕಾರ್ಪಣೆ ಆಗುತ್ತಿದ್ದು, ವಾಣಿಜ್ಯ, ಕೈಗಾರಿಕೆ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರಗಳ ಅಭಿವೃದ್ಧಿಯು ಸಾಧ್ಯವಾಗಲಿದೆ. ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿರುವ ಜಿಲ್ಲೆ ಶಿವಮೊಗ್ಗ. ಉತ್ತಮ ಯೋಜನೆಗಳ ಮುಖಾಂತರ ಅಭಿವದ್ಧಿ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಜೆ.ಆರ್.ವಾಸುದೇವ್ ಮಾತನಾಡಿ ಶಿವಮೊಗ್ಗ ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ವೈಶಿಷ್ಟ್ಯಗಳ ಬಗ್ಗೆ ನುಡಿದರು. ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಡಿ.ಎಂ.ಶಂಕರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯ ಸಹಕಾರ್ಯದರ್ಶಿ ಅ.ನ.ವಿಜಯೇಂದ್ರ ನಿರೂಪಿಸಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...