Sunday, June 22, 2025
Sunday, June 22, 2025

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು- ಶ್ರೀಪ್ರಸನ್ನನಾಥ ಸ್ವಾಮೀಜಿ

Date:

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ತೋರಿಸಿಕೊಟ್ಟಂತಹ ಸಂವಿಧಾನ ನಮ್ಮ ದೇಶದ್ದು, ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕರ‍್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಗುರುಪುರದಲ್ಲಿರುವ ಬಿಜಿಎಸ್ ಶಾಲಾ ಕಾಲೇಜಿನಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಕರ‍್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಸ್ವಾತಂತ್ರ್ಯ ನಂತರ ಭಾರತದ ಪ್ರಜೆಗಳಾದ ನಾವುಗಳು ಹೇಗೆ ಬದುಕಬೇಕು, ದೈನಂದಿನ ಬದುಕು ಹೇಗಿರಬೇಕು, ನಮ್ಮ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ರೂಪಿಸುವ ಸಲುವಾಗಿ ನಿಯಮಗಳನ್ನು ರೂಪಿಸಲಾಯಿತು. ಅದುವೇ ಸಂವಿಧಾನ ಎಂದರು.

ಈ ಸಂವಿಧಾನ ರಚಿಸಲು ಡಾ. ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಯಿತು. ಅವರು ನೀಡಿದಂತಹ ವರದಿಯ ಅನುಸಾರ ನಮ್ಮ ಸಂವಿಧಾನ ಜಾರಿಗೆ ಬಂದಿತು. ಅತ್ಯಂತ ಬಲಿಷ್ಟವಾದ ಮತ್ತು ಪ್ರಬುದ್ದವಾದ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ ಎಂದ ಅವರು, ವಿಶ್ವದಲ್ಲಿಯೇ ಅತ್ಯಂತ ಉತ್ತಮವಾದ ಸಂವಿಧಾನವನ್ನು ಹೊಂದಿರುವ ದೇಶ ಭಾರತವಾಗಿದೆ ಎಂದರು.

ಇದೇ ತಿಂಗಳು ನಾವು ಮತದಾರರ ದಿನಾಚರಣೆಯನ್ನು ಆಚರಿಸಿದ್ದೇವೆ, ನಮ್ಮ ಜನಪ್ರತಿನಿಧಿಯನ್ನು ಮತ್ತು ನಮ್ಮ ದೇಶವನ್ನು ಮುನ್ನಡೆಸುವಂತಹ ನಾಯಕರನ್ನು ಆರಿಸಿಕೊಳ್ಳುವಂತಹ ಅವಕಾಶ ಮತ್ತು ಹೊಣೆಗಾರಿಕೆ ನಮ್ಮ ಮೇಲೆಯೇ ಇದೆ. ದುರಂತವೆಂದರೆ ಮತದಾನದಲ್ಲಿ ಪಾಲ್ಗೊಳ್ಳದೇ ಇರುವುದು ನಮಗೆ ನಾವೇ ದ್ರೋಹ ಮಾಡಿಕೊಂಡಂತಾಗಿದೆ. ಆದ್ದರಿಂದ ಪ್ರತಿಯೊಬ್ಬರು ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತವನ್ನು ಚಲಾಯಿಸುವ ಮೂಲಕ ಉತ್ತಮ ಜನನಾಯಕರನ್ನು ಆಯ್ಕೆ ಮಾಡಿ ದೇಶದ ಹಾಗೂ ರಾಜ್ಯದ ಭವಿಷ್ಯವನ್ನು ಭದ್ರಗೊಳಿಸುವಂತಹ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಧ್ವಜಾರೋಹಣ ನೇರವೇರಿಸಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಗೌರಿಶಂಕರ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಕೂಡ ಕೌಶಲ್ಯ ಮತ್ತು ಜ್ಞಾನ ಅಡಗಿರುತ್ತದೆ. ಇಂದು ವಿದ್ಯಾರ್ಥಿಗಳಾಗಿರುವ ನೀವು ಭವಿಷ್ಯದಲ್ಲಿ ಮಹಾತ್ಮಾ ಗಾಂಧಿ, ನೆಹರೂ, ಸುಭಾಷ್ ಚಂದ್ರಬೋಸ್, ಐನ್‌ಸ್ಟೀನ್ ಸೇರಿದಂತೆ ಮಹಾನ್ ವ್ಯಕ್ತಿಗಳಾಗಬಹುದಾಗಿದೆ ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ನಿರಂತರ ಶ್ರಮವನ್ನು ನಡೆಸಿದ್ದೇ ಆದರೆ ನಿಮ್ಮ ಗುರಿಯನ್ನು ತಲುಪಬಹುದಾಗಿದೆ. ಇದರೊಂದಿಗೆ ಅದೃಷ್ಟವೂ ಕೂಡ ಬೇಕಾಗಿದೆ. ಇದರಲ್ಲಿ ಕೇವಲ ಒಂದನ್ನು ನಂಬಿ ಕೂರುವಂತಿಲ್ಲ ಎಂದ ಅವರು, ನಿಮ್ಮಲಿರುವ ಪ್ರತಿಭೆಯನ್ನು ಹೊರ ತೆಗೆಯುವಂತಹ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕಾಗಿದೆ ಎಂದರು.

ವೇದಿಕೆಯನ್ನು ಭಯವನ್ನು ಬಿಟ್ಟರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಎಂತಹ ಸಮಾರಂಭವನ್ನು ಸಮರ್ಥವಾಗಿ ಎದುರಿಸುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, ನಿಮ್ಮಲಿರುವ ಜ್ಞಾನವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರಾಜ್ಯ ಹಾಗೂ ರಾಷ್ಟ್ರದ ಪ್ರಜೆಗಳಾಗಿ ಎಂದು ಹಾರೈಸಿದರು.

ಸಮಾರಂಭದಲ್ಲಿ ಪ್ರಾಂಶುಪಾಲ ಎಸ್.ಹೆಚ್.ಸುರೇಶ್, ಉಪನ್ಯಾಸಕ ರಮೇಶ್, ಅಧ್ಯಾಪಕ ಹರೀಶ್, ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ದೈಹಿಕ ಶಿಕ್ಷಕ ರಾ.ಹ.ತಿಮ್ಮೇನಹಳ್ಳಿ ಗಣರಾಜ್ಯೋತ್ಸವ ಕರ‍್ಯಕ್ರಮವನ್ನು ಸಂಪೂರ್ಣವಾಗಿ ನಿರ್ವಹಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...