Friday, March 20, 2026
Friday, March 20, 2026

ಮೊದಲಿಗೆ ನಮಗೆ ನಾವು ಬೆಳಕಾಗ ಬೇಕು- ಶ್ರೀಪ್ರಸನ್ನನಾಥ ಸ್ವಾಮೀಜಿ

Date:

ವ್ಯಾಸಂಗದ ಮೂಲಕ ಗಳಿಸುವ ಅಂಕ ಗಳಿಕೆಯೊಂದೇ ಜೀವನವಲ್ಲ. ಬದುಕಿನ ಪ್ರತಿ ಗಳಿಕೆಯನ್ನು ಪ್ರಜ್ಞಾಪೂರ್ವಕವಾಗಿ ಕಳೆಯಬೇಕು. ಮೊದಲು ನಮಗೆ ನಾವು ಬೆಳಕಾಗಬೇಕು, ನಮ್ಮ ಬದುಕು ಬೆಳಗುತ್ತಿದ್ದರೆ, ಬೇರೆಯವರಿಗೆ ಬೆಳಕು ಸಿಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ ಹೇಳಿದರು.

ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶಿವಮೊಗ್ಗ ಶಾಖೆಯ ಭದ್ರಾವತಿ ತಾಲ್ಲೂಕಿನ ಬೈಪಾಸ್ ರೋಡಿನಲ್ಲಿರುವ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬಿಜಿಎಸ್ ಗುರುಕುಲೋತ್ಸವ 2022– 23 ನೇ ಸಾಲಿನ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ನಾವು ಬೆಳೆಯುವ ಜೊತೆಗೆ ಇನ್ನೊಬ್ಬರನ್ನು ಬೆಳೆಸುವ ಸಾಮರ್ಥ್ಯ ಪಡೆಯಲು ಮೊದಲು ನಮ್ಮ ಜೀವನದಲ್ಲಿ ಶಿಸ್ತು ರೂಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದೇ ರೀತಿಯ ಗ್ರಹಿಕ ಶಕ್ತಿ ಹಾಗೂ ಸಾಮರ್ಥ್ಯ ಇರಲು ಸಾಧ್ಯವಿಲ್ಲ.ಹಾಗಾಗಿ ಪೋಷಕರು ಮಕ್ಕಳ ಅಭಿರುಚಿಗೆ ತಕ್ಕ ಪ್ರೋತ್ಸಾಹ ನೀಡಿದರೆ ಅವರು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಪರಮೇಶ್ವರಪ್ಪ , ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿರ್ದೇಶಕರಾದ ಸತೀಶ್ ಡಿ.ವಿ ,ಭದ್ರಾವತಿ ತಾಲ್ಲೂಕು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರಾದ ರಮೇಶ್ , ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಭದ್ರಾವತಿ ಶಾಖೆ ಆಡಳಿತಾಧಿಕಾರಿಗಳಾದ ಜಗದೀಶ್ ಬಿ , ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಕೇಶವಮೂರ್ತಿ ಜಿ , ಮತ್ತು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು.

ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ,ಕಲೆ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದಲ್ಲಿ ಭರತನಾಟ್ಯ , ಯಕ್ಷಗಾನ, ಸೇರಿದಂತೆ ವಿವಿಧ ಜನಪದ ಸಾಂಸ್ಕೃತಿಕ ವೈಭವವನ್ನು ವಿದ್ಯಾರ್ಥಿಗಳು ಆಕರ್ಷಕವಾಗಿ ಪ್ರದರ್ಶನ ನೀಡಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...