Monday, August 24, 2026
Monday, August 24, 2026

ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಯೋಜನೆ ಕುರಿತ ಕ್ಯಾಲೆಂಡರ್ ಬಿಡುಗಡೆ

Date:

ಚಿಕ್ಕಮಗಳೂರು: ಜೆಡಿಎಸ್‌ನ ಪಂಚರತ್ನ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಉದ್ದೇಶದಿಂದ ಪಕ್ಷದ ಕಚೇರಿಯಲ್ಲಿ ಯೋಜನೆ ಸಂಬಂಧಪಟ್ಟ 2023ರ ನೂತನ ಕ್ಯಾಲೆಂಡರ್‌ನ್ನು ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಬಿ.ಎಂ.ತಿಮ್ಮ ಶೆಟ್ಟಿ ಸುಮಾರು ನಲವತ್ತು ಸಾವಿರಕ್ಕೆ ಹೆಚ್ಚು ಕ್ಯಾಲೆಂಡರ್ ಮುದ್ರಣಗೊಳಿಸಲಾಗಿದ್ದು, ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಮನೆಗಳಿಗೆ ಹಂಚಿಕೆ ಮಾಡುವ ಮೂಲಕ ಯೋಜನೆಯ ಮಾಹಿತಿಯನ್ನು ತಿಳಿಸಲಾಗುವುದು ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಯೋಜನೆಗಳೇ ಪರಿಹಾರ ಎಂಬುದು ಜೆಡಿಎಸ್ ಅರಿತು ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯವೇ ಸಂಪತ್ತು, ರೈತ ಚೈತನ್ಯ, ಯುವನವ ಮಾರ್ಗ ಮತ್ತು ಮಹಿಳಾ ಸಬಲೀಕರಣ ಹಾಗೂ ವಸತಿಯ ಆಸರೆ ಎಂಬ ಐದು ಯೋಜನೆಯ ಅಂಶಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಿಸಾರ್ ಅಹ್ಮದ್, ಎಸ್ಸಿಎಸ್ಟಿ ಘಟಕದ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ನಗರಾಧ್ಯಕ್ಷ ಚಿದಾನಂದ್, ನಗರಸಭಾ ಸದಸ್ಯ ಗೋಪಿ, ದಿನೇಶ್, ಮಹಿಳಾ ಘಟಕದ ನಗರಾಧ್ಯಕ್ಷೆ ಜಯಂತಿ, ಮುಖಂಡರುಗಳಾದ ಸಿ.ಎನ್.ದೇವರಾಜ್ ಅರಸ್, ನಾಗರತ್ನ, ಸುಲೋಚನಾ ರಮೇಶ್, ಶಿವು, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...