ರಾಜ್ಯ ಸರ್ಕಾರಿ ನೌಕರರ ಸಂಘವು ಫೆಬ್ರವರಿ 04ರಂದು ಬೆಳಿಗ್ಗೆ 10:30ಕ್ಕೆ ನಗರದ ಕುವೆಂಪು ರಂಗಮಂದಿರದ ಹಿಂಭಾಗದ ಎನ್.ಇ.ಎಸ್.ಕಾಲೇಜು ಆವರಣದಲ್ಲಿ ಸರ್ಕಾರಿ ನೌಕರರ ಸಮ್ಮೇಳನವನ್ನು ಆಯೋಜಿಸಿದೆ.
ಈ ಸಮ್ಮೇಳನದಲ್ಲಿ ಹಾಸ್ಯ ಕಲಾವಿದ ಪ್ರಾಣೇಶ್ ಅವರು ಆಗಮಿಸಿ, ಕೆಲಸದ ಒತ್ತಡಕ್ಕೆ ನಗೆ ಮದ್ದು ಎಂಬ ವಿಷಯದ ಕುರಿತು ಹಾಸ್ಯ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಇದೇ ಸಂದರ್ಭದಲ್ಲಿ ಚಿಂತಕ, ವಾಗ್ಮಿ ಡಾ|| ಗುರುರಾಜ ಕರ್ಜಗಿ ಅವರು ಆಗಮಿಸಿ ಪ್ರಜಾಸ್ನೇಹಿ ಆಡಳಿತದ ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲೆಯ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮನವಿ ಮಾಡಿದ್ದಾರೆ.