ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆ ಮುಚ್ಚದಂತೆ ಒತ್ತಾಯಿಸಿ ಎನ್ ಎಸ್ ಯು ಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಆಧುನಿಕ ಮೈಸೂರು ನಿರ್ಮಾತೃಗಳಲ್ಲೊಬ್ಬರಾದ ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನ ಕೇಂದ್ರ ಸರ್ಕಾರ ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದು ಜಿಲ್ಲಾ ಎನ್ಎಸ್ ಯು ಸಂಘಟನೆ ತಿಳಿಸಿದೆ.
ವಿಐಎಸ್‌ಎಲ್ ಕಾರ್ಖಾನೆ ಸಾವಿರಾರು ಕಾರ್ಮಿಕರಿಗೆ ಉದ್ಯೋಗ ನೀಡುವ ಮೂಲಕ ಭದ್ರಾವತಿ ಭಾಗದ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತಲೇ ಬಂದಿದೆ.
ಆದರೆ, ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗೆ ಗಣಿ ಒದಗಿಸುವಲ್ಲಿ, ಅಗತ್ಯ ಯಂತ್ರೋಪಕರಣಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದು, ಕಾರ್ಖಾನೆ ನಷ್ಟದ ಹಾದಿ ಹಿಡಿಯಲು ಕಾರಣವಾಗಿದೆ. ಇದೀಗ ಕಾರ್ಖಾನೆಯನ್ನು ಮುಚ್ಚುವ ಪ್ರಯತ್ನ ನಡೆಸುತ್ತಿದ್ದು, ಇದರಿಂದ ಸಾವಿರಾರು ಕಾರ್ಮಿಕರು ಬೀದಿಗೆ ಬೀಳುತ್ತಿದ್ದಾರೆ. ಜಿಲ್ಲೆಯ ಆರ್ಥಿಕ ಚಟುವಟಿಕೆಯೂ ಕುಸಿಯುತ್ತಿದೆ. ಇದಕ್ಕೆಲ್ಲ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಎನ್ ಎಸ್ ಯು ಐ ಸಂಘಟನೆ ತಿಳಿಸಿದೆ.
ಜಿಲ್ಲೆಯ ಮತ್ತೊಂದು ಕೈಗಾರಿಕೆ ಎಂಪಿಎಂ ಸಹ ಬಿಜೆಪಿ ಸರ್ಕಾರದ ಹೊಣೆಗೇಡಿತನದಿಂದಾಗಿ ಮುಚ್ಚಲಾಗಿದೆ. ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿಕೊಳ್ಳುತ್ತಲೇ ಅಧಿಕಾರಕ್ಕೆ ಬಂದ ಬಿಜೆಪಿ ಉದ್ಯೋಗ ಸೃಜಿಸುವ ಬದಲು, ಸರ್ಕಾರಿ ಸ್ವಾಮ್ಯದ ಒಂದೊಂದೇ ಉದ್ಯಮಗಳನ್ನು ಮುಚ್ಚುತ್ತಾ ಮತ್ತಷ್ಟು ನಿರುದ್ಯೋಗ ಸೃಷ್ಟಿಗೆ ಕಾರಣವಾಗಿದೆ.
ಗೌರವಾನ್ವಿತ ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸುವಂತೆ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಜಿಲ್ಲಾ ಎನ್ಎಸ್ ಯುಐ ಒತ್ತಾಯಿಸಿದೆ.
ಹಾಗೆಯೇ ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೂ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸುತ್ತಿದೆ.
ವಿಐಎಸ್‌ಎಲ್ ಉಳಿವಿಗೆ ಹೋರಾಡುತ್ತಿರುವ ಕಾರ್ಮಿಕರ ಜೊತೆ ಎನ್.ಎಸ್.ಯು.ಐ. ಸದಾ ಇರಲಿದೆ. ಕೂಡಲೇ ಸರ್ಕಾರ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಎನ್.ಎಸ್.ಯು.ಐ. ವತಿಯಿಂದ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ತಿಳಿಸಿದೆ.
ಪ್ರತಿಭಟನೆಯಲ್ಲಿ ಎನ್ ಎಸ್ ಯು ಐ ನ ರವಿ ಕಾಟಿಕೆರೆ, ಚರಣ್, ರ‍್ಷಿತ್ ,ವಿಕ್ರಂ, ರವಿ,ಚಂದ್ರು ಜಿ ರಾವ್ ,ತೌಫಿಕ್, ಹೇಮಂತ್, ಚರಣ್, ದೀಕ್ಷಿತ್ ಪ್ರದೀಪ್ ,ವರುಣ್ ವಿ ಪಂಡಿತ್, ನಾಗೇಂದ್ರ, ಸಾಗರ್, ಹಾಗೂ ಯುವ ಕಾಂಗ್ರೆಸ್ ನ , ಬಸವರಾಜ್, ಮಲಗಪ್ಪ ಶಿವು, ಅಬ್ದುಲ್, ಗಿರೀಶ್, ಆಕಾಶ್, ಗೌತಮ್ ನೂರಾರು ಯುವಕರು ಪಾಲ್ಗೊಂಡಿದ್ದರು
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.