Monday, June 23, 2025
Monday, June 23, 2025

ತವರು ಮನೆಯಿಂದ ಮೆರವಣಿಗೆ ಮೂಲಕ ಪತಿಯ ಮನೆಗೆ ಬಂದ ಮಾರಿಕಾಂಬೆ

Date:

ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ತಾಯಿಯ ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು ಮನೆ ದೇವಸ್ಥಾನದಲ್ಲಿ ಜಮಾಯಿಸಿದ್ದರು.

ಮಂಗಳವಾರ ರಾತ್ರಿ 11ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ನಡೆಯಿತು. ನಂತರ ಹೆಣ್ಣು ಒಪ್ಪಿಸುವ ಧಾರ್ಮಿಕ ಪೂಜಾ ವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ನೂಕು ನುಗ್ಗಲಾಯಿತು.

ಶ್ರೀ ದೇವಿಯ ದಂಡಿನ ಮೆರವಣಿಗೆಯು ಪ್ರಸಿದ್ಧ ಕಲಾತಂಡಗಳ ಪಾಲ್ಗೊಳ್ಳುವಿಕೆಯ ಜತೆಯಲ್ಲಿ ನಡೆಯಿತು. ಭಕ್ತರು ದೇವಿಯ ದರ್ಶನ ಪಡೆದರು.
ಬೆಳ್ತಂಗಡಿಯ ಸೃಷ್ಠಿ ಆರ್ಟ್ಸ್ ನ ಕಲಾವಿದರ ತಂಡ, ಕೀಲುಕುದುರೆ, ಕರಗ, ರಾಜ, ರಾಣಿ, ಸಿಂಹ ಸೇರಿದಂತೆ ವಿವಿಧ ವೇಷಧಾರಿಗಳು, ಹುಬ್ಬಳ್ಳಿಯ ಬ್ಯಾಂಡ್ ಬಳಗ, ಸಿರಸಿಯ ಮುಖೇಶ್ ಆರ್ಟ್ಸ್ ಬೇಡರ ವೇಷದ ಕಲಾವಿದರು, ಅರಸಿಕೇರೆಯ ಶ್ರೀ ರಾಮ ಯುವಕರ ಕಲಾಸಂಘದ ಸದಸ್ಯರು ಸೋಮನ ಕುಣಿತ, ನಂದಿಕೋಲು ನಡೆಸಿಕೊಟ್ಟರು.

ವಾದ್ಯಗಾರರು ಕಾಂತಾರ ಚಲನಚಿತ್ರದ ಗೀತೆಯನ್ನು ನುಡಿಸಿದರು. ಮಂಡ್ಯ ಕೆ.ಆರ್.ನಗರದ ಆದಿಶಕ್ತಿ ತಂಡವು ನಗಾರಿ, ಡೊಳ್ಳು ಕಲಾವಿದರು, ಚಂಡೆವಾದನ, ಮಂಗಳವಾದ್ಯ ಸೇರಿದಂತೆ ಮುಂತಾದ ಕಲಾತಂಡಗಳ ಸದಸ್ಯರು ರಾಜಬೀದಿ ಉತ್ಸವದಲ್ಲಿ ಭಾಗವಹಿಸಿದ್ದರು.

ಭವ್ಯರಥದಲ್ಲಿ ಶ್ರೀ ಮಾರಿಕಾಂಬೆಯನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬುಧವಾರ ಬೆಳಗ್ಗೆ ಗಂಡನ ಮನೆಗೆ ತರಲಾಯಿತು. ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಸಿದ್ಧಪಡಿಸಿದ್ದ ಬೃಹತ್ ವೇದಿಕೆಯಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಧಾರ್ಮಿಕ ಆಚರಣೆಗಳನ್ನು ನಡೆಸಲಾಯಿತು.

ಬುಧವಾರದದಿಂದ ಗಂಡನ ಮನೆ ಆವರಣದಲ್ಲಿ ಶ್ರೀ ಮಾರಿಕಾಂಬಾ ದೇವರ ದರ್ಶನಕ್ಕೆ ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಗಂಡನ ಮನೆ ದೇವಸ್ಥಾನದಲ್ಲಿ ಶ್ರೀ ದೇವಿಯ ಘಟೇವು ಪ್ರವೇಶ ನಂತರ ಮಂಗಳಾರತಿ ನಡೆಸಲಾಯಿತು.

ಫೆ. 15ರವರೆಗೂ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾರಿಕಾಂಬ ಜಾತ್ರೆಯ ಎರಡನೇ ದಿನವೂ ದೇವಿಯ ದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿ ಪೂಜೆ ಸಲ್ಲಿಸಿದರು.

ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ, ಪೋತರಾಜ ರವಿ, ಉಪಾಧ್ಯಕ್ಷರು, ಸಹ ಕಾರ್ಯದರ್ಶಿ, ವಿವಿಧ ಸಮಿತಿ ಸಂಚಾಲಕರು ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...