Friday, September 27, 2024
Friday, September 27, 2024

ವೇತನ ಆಯೋಗಕ್ಕೆ ಸರ್ಕಾರಿ ನೌಕರರ ಸಂಘದಿಂದ ಅಗತ್ಯ ಮಾಹಿತಿ ಸಲ್ಲಿಕೆ- ಷಡಾಕ್ಷರಿ

Date:

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ವೇತನ ಆಯೋಗದ ಅಧ್ಯಕ್ಷರಿಗೆ ಆಯೋಗದ ಅನೇಕ ಪ್ರಶ್ನೆಗಳಿಗೆ ಅಗತ್ಯ ಮಾಹಿತಿಗಳೊಂದಿಗೆ ಲಿಖಿತ ಉತ್ತರವನ್ನು ಸಲ್ಲಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.

ಅವರು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗಾಗಿ ಸರ್ಕಾರವು ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ 8ನೇ ವೇತನ ಆಯೋಗವನ್ನು ರಚಿಸಿತ್ತು. ನೌಕರರ ವೇತನ, ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಆಯೋಗವು ಜನವರಿ 18ರಂದು ಪ್ರಶ್ನಾವಳಿಗಳನ್ನು ಬಿಡುಗಡೆಗೊಳಿಸಿ, ನೌಕರರ ಸಂಘದಿಂದ ಉತ್ತರ, ಅಭಿಪ್ರಾಯ ಮತ್ತು ಸಲಹೆಗಳನ್ನು ಆಹ್ವಾನಿಸಿತ್ತು.

ಈ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳ ನಿಯೋಗವು ಅಧ್ಯಕ್ಷರನ್ನು ಭೇಟಿ ಮಾಡಿ ಮಾಹಿತಿ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಈ ಉತ್ತರ ಸಲ್ಲಿಸುವುದಕ್ಕೆ ಮುನ್ನ ರಾಜ್ಯದಾದ್ಯಂತ ವಿವಿದ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ-ನೌಕರರಿಂದ ಮಾಹಿತಿಗಳನ್ನು ಸಂಗ್ರಹಿಸಿ, ಸಂಘದ ಹಿರಿಯ ಪದಾಧಿಕಾರಿಗಳು ಮತ್ತು ವೃಂದ ಸಂಘಗಳ ಅಧ್ಯಕ್ಷರು ಸುದೀರ್ಘವಾಗಿ ಸಮಾಲೋಚನೆಯ ನಂತರ 65 ಪುಟಗಳ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಿರುವುದಾಗಿ ತಿಳಿಸಿರುವ ಅವರು, ಸಂಘವು ಪ್ರಸ್ತಾಪಿಸಿರುವ ಅಂಶಗಳು ಸಕಾರಾತ್ಮಕವಾಗಿದೆ. ಸರ್ಕಾರದ ಹಿತ ಹಾಗೂ ರಾಜ್ಯ ಸರ್ಕಾರದ ಅಧಿಕಾರಿ-ನೌಕರರ ಅಭ್ಯುದಯವನ್ನು ಪರಿಗಣಿಸಿದೆ ಎಂದವರು ತಿಳಿಸಿದ್ದಾರೆ.

ಮುಖ್ಯಾಂಶಗಳು ಹಾಗೂ ಹೊಸ ವೇತನ ಶ್ರೇಣಿಗಳ ರಚನೆಗೆ ಅಳವಡಿಸಿಕೊಂಡಿರುವ ಮಾನಂದಂಡಗಳು :
ಸಮಾನ ಕೆಲಸಕ್ಕೆ-ಸಮಾನ ವೇತನ, ವಿದ್ಯಾರ್ಹತೆ, ಜವಾಬ್ದಾರಿಯ ಗುಣಮಟ್ಟ, ಕಾರ್ಯಕ್ಷಮತೆ, ಕಾರ್ಯಕ್ಷೇತ್ರದ ವ್ಯಾಪ್ತಿ, ಜೊತೆಗೆ ನೆರೆ ರಾಜ್ಯ ಮತ್ತು ಕೇಂದ್ರ ವೇತನ ಮತ್ತು ಭತ್ಯೆಗಳ ಹೋಲಿಕೆಗಳನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.

ಕಚೇರಿ ವೇಳೆಯನ್ನು ಹೆಚ್ಚಿಸಿ, ವಾರದ ಕರ್ತವ್ಯದ ದಿನಗಳನ್ನು ಕಡಿಮೆ ಮಾಡುವುದು.

ಸರ್ಕಾರಕ್ಕೆ ಸಾರಿಗೆ, ವಿದ್ಯುತ್, ನೀರು, ಟ್ರಾಫಿಕ್, ಸರ್ಕಾರಿ ವಾಹನಗಳ ಇಂಧನ ಹಾಗೂ ನಿರ್ವಹಣೆ, ವೆಚ್ಚದಲ್ಲಿ ಆರ್ಥಿಕ ಮಿತವ್ಯಯ ಸಾಧಿಸುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರಿ ನೌಕರರಿಗಿರುವಂತೆ ಬೆಳಿಗ್ಗೆ 10ಕ್ಕೆ ಬದಲಾಗಿ ಬೆಳಿಗ್ಗೆ 9.30ರಿಂದ ಹಾಗೂ ಸಂಜೆ 5.30ಕ್ಕೆ ಬದಲಾಗಿ ಸಂಜೆ 6 ರವರೆಗೆ ಬದಲಾಯಿಸುವುದು. ತಿಂಗಳ ಮೊದಲ ಮತ್ತು ಮೂರನೆ ಶನಿವಾರ ಸಾರ್ವತ್ರಿಕ ರಜೆ ನೀಡುವುದು, ವೇತನ ಹೆಚ್ಚಳ ಹೊರೆ-ಸರಿದೂಗಿಸುವ ನಿಟ್ಟಿನಲ್ಲಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು, ಆಡಳಿತದಲ್ಲಿ ತಂತ್ರಜ್ಞಾನವನ್ನು ಹೆಚ್ಚಿಸುವುದು, ನೌಕರರಲ್ಲಿ ದಕ್ಷತೆ ಮತ್ತು ನೈಪುಣ್ಯತೆ ಹಾಗೂ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಎಟಿಐ ಮಾದರಿ ತರಬೇತಿ ನೀಡುವ ಬಗ್ಗೆಯೂ ಗಮನಹರಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಅಲ್ಲದೆ, ಅನುಕೂಲವಾಗುವ ಕೇಂದ್ರ ಮತ್ತು ಕೇರಳ ರಾಜ್ಯ ನೌಕರರ ವೇತನ-ಭತ್ಯೆಗಳನ್ನು ಪರಿಗಣಿಸಬೇಕು, 6ನೇ ವೇತನ ಆಯೋಗದಲ್ಲಿ ಪ್ರಸ್ತುತ ಮೂಲ ವೇತನಕ್ಕೆ ಹಾಲಿ ಇರುವ ಶೇ.31ರಷ್ಟು ತುಟ್ಟಿಭತ್ಯೆಯನ್ನು ವಿಲೀನಗೊಳಿಸಿ ಶೇ. 40%ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು ದಿನಾಂಕ:1/3/2022 ರಿಂದ ಜಾರಿಗೆ ತರುವ ಬಗ್ಗೆಯೂ ಆಯೋಗದ ಗಮನಸೆಳೆಯಲಾಗಿದೆ ಎಂದವರು ತಿಳಿಸಿದ್ದಾರೆ. 2023ರಲ್ಲಿ ಪರಿಷ್ಕರಣೆಯಾಗಲಿರುವ ಕೇಂದ್ರ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ಈಗಾಗಲೇ 26 ರಾಜ್ಯಗಳಲ್ಲಿರುವಂತೆ ಯಥಾವತ್ತಾಗಿ ಅನ್ವಯಗೊಳಿಸಲು ಆಯೋಗವು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಹಾಲಿ ಇರುವ 25 ಮಾಸ್ಟರ್ ವೇತನ ಶ್ರೇಣಿ ಹಾಗೂ 92 ವೇತನ ಹಂತಗಳನ್ನು ಮುಂದುವರೆಸಬೇಕು. ಹೊಸ ವೇತನ ಶ್ರೇಣಿಗಳನ್ನು 2022ನೇ ಸಾಲಿನ ಬೆಲೆ ಸೂಚ್ಯಾಂಕದ 12 ತಿಂಗಳ ಸರಾಸರಿಯ ಆಧಾರದ ಮೇಲೆ ವೇತನ ಶ್ರೇಣಿಗಳ ದರಗಳನ್ನು ನಿಗದಿಪಡಿಸಬೇಕು, ಕನಿಷ್ಟ 40% ಫಿಟ್‌ಮೆಂಟ್‌ನೊಂದಿಗೆ ಹಾಗೂ ಜೀವನ ರ‍್ವಹಣೆಯನ್ನಾಧರಿಸಿ ಗ್ರೂಪ್ ‘ಡಿ’ ನೌಕರನ ಕನಿಷ್ಟ ಮೂಲ ವೇತನ ರೂ.21,000ಕ್ಕೆ ನಿಗದಿಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...