ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬ ಜಾತ್ರಾಪ್ರಯುಕ್ತ ಸಮಿತಿ ವತಿಯಿಂದ ಆಯೋಜಿಸಿರುವ ಹೊನಲು ಬೆಳಕಿನ ರಾಷ್ಟಮಟ್ಟದ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
3 ದಿನಗಳ ಕಾಲ ಕುಸ್ತಿ ಪಂದ್ಯಾವಳಿ ನಡೆಯಲಿದೆ.
ರಾಷ್ಟಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ದೇಶದ ವಿವಿಧರಾಜ್ಯದ ಕುಸ್ತಿಪಟುಗಳು ಪಾಲ್ಗೊಳ್ಳಲಿದ್ದು, ನುರಿತ ತೀರ್ಪುಗಾರರ ನೇತೃತ್ವದಲ್ಲಿ ಘಟಾನುಘಟಿಗಳ ಕುಸ್ತಿ ಪಂದ್ಯಗಳು ನಡೆಯಲಿವೆ.
ಮೊದಲ ದಿನವೇ ನೂರಾರು ಕುಸ್ತಿಪಟುಗಳು ಭಾಗವಹಿಸಿದ್ದರು.ಮೊದಲ ದಿನದ ಪಂದ್ಯಗಳು ರೋಚಕ ಹಣಾಹಣಿಯಿಂದ ನಡೆದವು.
ಫೆ.10 ರಿಂದ ಕುಸ್ತಿ ಪಂದ್ಯಾವಳಿ ಆರಂಭವಾಗಿದೆ. ಶನಿವಾರ ಹಾಗೂ ಭಾನುವಾರ ಸಹ ರಾಷ್ಟಮಟ್ಟದಲ್ಲಿ ಹೆಸರು ಗಳಿಸಿರುವ ಕುಸ್ತಿಪಟುಗಳ ಪಂದ್ಯಗಳು ನಡೆಯಲಿವೆ.
ಎರಡು ದಿನ ಮಧ್ಯಾಹ್ನ 3ರಿಂದ ರಾತ್ರಿ 9 ರವರೆಗೂ ಕುಸ್ತಿ ಪಂದ್ಯಗಳು ನಡೆಯಲಿವೆ. ವಿವಿಧ ರಾಜ್ಯಗಳಿಂದ ಆಗಮಿಸಿರುವ ಕುಸ್ತಿಪಟುಗಳಿಗೆ ಜಾತ್ರಾ ಸಮಿತಿ ವತಿಯಿಂದ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ.
ರ‍್ಯಾಣ, ಮಧ್ಯಪ್ರದೇಶ, ಮಹಾರಾಷ್ಟ, ಪಂಜಾಬ್ ಸೇರಿದಂತೆರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಕುಸ್ತಿ ಪಂದ್ಯಗಳಲ್ಲಿ ಗಮನ ಸೆಳೆದಿದ್ದ ಕುಸ್ತಿಪಟುಗಳು ಆಗಮಿಸಿದ್ದರು.
ಮಹಾರಾಷ್ಟದರಾಮ್, ಓಮಾಂಕ್ಷ್, ರ‍್ಯಾಣದ ಬಂಟಿ, ತೇಜು ಸೇರಿದಂತೆ ವಿವಿಧ ಕುಸ್ತಿಪಟುಗಳು ಆಗಮಿಸಿದ್ದರು.
ಮೊದಲ ದಿನದಂದು ಶಿಕಾರಿಪುರದ ರಾಘು, ಚಂದ್ರು, ದಾವಣಗೆರೆರಾಕಿ, ಲಕ್ಷ್ಮಣ್, ಬೊಮ್ಮನಕಟ್ಟೆ, ಮಧು ಭದ್ರಾವತಿ, ಶಿವಮೊಗ್ಗ ವಿನಯ ಭಗತ್ ಸೇರಿದಂತೆ ಶಿವಮೊಗ್ಗ ಜಿಲ್ಲೆ, ದಾವಣಗೆರೆಜಿಲ್ಲೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಕುಸ್ತಿಪಟುಗಳು ಭಾಗವಹಿಸಿದ್ದರು.
ವಿಜೇತರಿಗೆ ಬೆಳ್ಳಿ ಪದಕ, ಬೆಳ್ಳಿ ಬಳೆ, ಬೆಳ್ಳಿಯ ಗದೆ ಸೇರಿದಂತೆ ವಿಶೇಷ ನಗದು ಬಹುಮಾನಹಾಗೂ ಪ್ರಶಸ್ತಿ ಪತ್ರನೀಡಲಾಗುತ್ತಿದೆ. ಶ್ರೀ ಮಾರಿಕಾಂಬ ಜಾತ್ರಾಸಮಿತಿ ಕುಸ್ತಿ ಸಂಚಾಲಕರಾಗಿ ಎಸ್.ಅಶೋಕ್, ಸಹಸಂಚಾಲಕರಾಗಿ ಎಂ.ಎಸ್.ಶಶಿಕಾಂತ್ ಮತ್ತುಜಗನ್ನಾಥ್ ಜೇಡಿ ಕುಣಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸಾಗರದ ಮಾರಿಕಾಂಬ ಜಾತ್ರೆ ವೇಳೆಯಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿ ವೀಕ್ಷಿಸಲು ಮೊದಲ ದಿನವೇ ಸಾವಿರಾರುಜನರು ಆಗಮಿಸಿದ್ದರು.ರಾಜ್ಯದ ವಿವಿಧಕಡೆಯಿಂದ ಕುಸ್ತಿ ಪ್ರೇಮಿಗಳು ಆಗಮಿಸಿದ್ದರು.
ರಾಷ್ಟಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತ ಕುಸ್ತಿಪಟುಗಳಿಗೆ ಬೆಳ್ಳಿ ಬಹುಮಾನ ಹಾಗೂ ವಿಶೇಷ ನಗದು ಬಹುಮಾನ ನೀಡಲಾಗುತ್ತಿದೆ.
200 ಬೆಳ್ಳಿ ಪದಕ, ಬೆಳ್ಳಿ ಬಳೆ,ಬೆಳ್ಳಿ ಗದೆ ಪಂದ್ಯಗಳು ನಡೆಯಲಿವೆ. 1 ಸಾವಿರ ರೂಪಾಯಿಯಿಂದ 25-50 ಸಾವಿರರೂ.ವರೆಗಿನ ಪಂದ್ಯಗಳು ನಡೆಯಲಿವೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

