Friday, February 6, 2026
Friday, February 6, 2026

ಕನ್ನಡ ನಟಿ ಪ್ರೇಮಾ: ಸಿನಿಮಾ ಬದುಕಿನ ಬೆಳ್ಳಿಹಬ್ಬದ ಸಡಗರ

Date:

ಶಿವಮೊಗ್ಗ: ನಟಿ ಪ್ರೇಮಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಪ್ರಯುಕ್ತ ಸಮನ್ವಯ ಟ್ರಸ್ಟ್ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19ರ ಸಂಜೆ 6ಕ್ಕೆ “ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಕಾರ್ಯಕ್ರಮ ಆಯೋಜಿಸಲಾಗಿದೆ.

ನಾಯಕ ನಟರು 25 ವರ್ಷ ಪೂರೈಸಿ ಚಲನಚಿತ್ರರಂಗದಲ್ಲಿ ಯಶಸ್ವಿಯಾಗುವುದು ಸಾಮಾನ್ಯ. ಆದರೆ ನಾಯಕ ನಟಿಯರು 25 ವರ್ಷ ಪೂರ್ಣಗೊಳಿಸುವುದು ಕಷ್ಟದ ಮಾತು. ನಟಿ ಪ್ರೇಮಾ ಅವರು ಚಿತ್ರರಂಗದಲ್ಲಿ 25 ವರ್ಷ ಪೂರೈಸಿ ಪ್ರಸ್ತುತ ಕೂಡ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದೆ. ಉತ್ತಮ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಸವ್ಯಸಾಚಿ ಸಿನಿಮಾ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರೇಮಾ, ಓಂ ಚಿತ್ರದ ಮೂಲಕ ಪ್ರಖ್ಯಾತರಾದರು.

ಶಿವರಾಜ್‌ಕುಮಾರ್, ವಿಷ್ಣುವರ್ಧನ್, ಉಪೇಂದ್ರ, ರವಿಚಂದ್ರನ್, ಸಾಯಿಕುಮಾರ್, ರಮೇಶ್ ಜತೆಯಲ್ಲಿ ಬಹುತೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ.

ಅತ್ಯಂತ ಅಪರೂಪ ಮತ್ತು ವಿಶೇಷವಾದ ಕಾರ್ಯಕ್ರಮ ಶಿವಮೊಗ್ಗದಲ್ಲಿ ಆಯೋಜನೆ ಆಗುತ್ತಿದೆ. 25 ವರ್ಷ ಪೂರೈಸಿ ಸಕ್ರಿಯರಾಗಿ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ನಟಿ ಪ್ರೇಮಾ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಸಿನಿಮಾ ರಂಗದ ಹಿರಿಯ ನಿರ್ದೇಶಕರು, ನಟರು, ಕಲಾವಿದರು, ಗಣ್ಯರು ಪಾಲ್ಗೊಳ್ಳುವರು. ಕುವೆಂಪು ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದ ಉಚಿತ ಪಾಸ್‌ಗಳನ್ನು ಪಡೆದುಕೊಳ್ಳುವಂತೆ ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಪಾಸ್ ಗಳಿಗೆ ಸಂಪರ್ಕಿಸಿ
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19ರ ಸಂಜೆ 6ಕ್ಕೆ ಆಯೋಜಿಸಿರುವ “ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಕಾರ್ಯಕ್ರಮಕ್ಕೆ ಪಾಸ್ ಕಡ್ಡಾಯವಾಗಿದೆ. ಉಚಿತ ಪಾಸ್‌ಗಳನ್ನು ಪಡೆಯಲು ಇಚ್ಚಿಸುವ ಆಸಕ್ತರು ಮೊಬೈಲ್ ಸಂಖ್ಯೆ 9380233123 ಸಂಪರ್ಕಿಸಬಹುದಾಗಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...