Shivamogga ವಿವಿಧ ಇಲಾಖೆಗಳ ಯೋಜನೆಗಳಿಗೆ ನೀಡುವ ಅನುದಾನವನ್ನು ಸರ್ಕಾರಕ್ಕೆ ಹಿಂದಿರುಗಿಸದೆ ಸೂಕ್ತವಾಗಿ ಬಳಸಿಕೊಂಡು ನಿಗದಿತ ಸಮಯದೊಳಗೆ ನಿರೀಕ್ಷಿತ ಪ್ರಗತಿ ಸಾಧಿಸುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಸೇಲ್ವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
Shivamogga ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ 2023ರ ಜನವರಿ ಅಂತ್ಯದೊಳಗಿನ ಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಗಳ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆಗೊಳಿಸಿದೆ. ಔಷಧ ಖರೀದಿ ಪ್ರಕ್ರಿಯೆ ವಿಳಂಬವಾಗದಂತೆ ಹಾಗೂ ಸಕಾಲದಲ್ಲಿ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಔಷಧ ಸರಬರಾಜು ಮಾಡುವ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿ, ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಿರ್ಮಿಸಬೇಕಾಗಿರುವ ಎರಡು ಕಟ್ಟಡಗಳ ನಿರ್ಮಾಣ ಕಾರ್ಯವನ್ನು ಎರಡು ತಿಂಗಳ ಒಳಗೆ ಟೆಂಡರ್ ಕರೆದು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಡಿ ಡಿ ಪಿ ಐ ಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ , ಜಿಲ್ಲಾ ಪಂಚಾಯತ್ ಸಿಇಒ ಎನ್.ಡಿ. ಪ್ರಕಾಶ್, ಪ್ರೊಬೆಷನಲ್ ಜಿಲ್ಲಾಧಿಕಾರಿ ದಲ್ ಜಿತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.