Thursday, March 19, 2026
Thursday, March 19, 2026

Pancharatna RathYatra ಫೆ,25 ರಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ

Date:

Pancharatna RathYatra  ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಂಚರತ್ನ ಯೋಜನೆಯ ರಥಯಾತ್ರೆಯು ಫೆ.25, 26 ಮತ್ತು 28ರಂದು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರುಗಳು ಅತ್ಯಂತ ಚುರುಕು ನಿಂದ ಕಾರ್ಯನಿರ್ವಹಿಸುವ ಮೂಲಕ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲು ಮುಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರು ಹೇಳಿದರು.

Pancharatna RathYatra  ಚಿಕ್ಕಮಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಂಚರತ್ನ ಯೋಜನೆಯ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಭಾನುವಾರ ಮಾತನಾಡಿದ ಅವರು, ರಥಯಾತ್ರೆಯು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರದ ಅಧ್ಯಕ್ಷರು ಹಾಗೂ ಮುಖಂಡರುಗಳು ರಥಯಾತ್ರೆ ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದು ಹೇಳಿದರು.

ರಥಯಾತ್ರೆಯು ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯಾದ್ಯಂತ ಈಗಾಗಲೇ 60 ಕ್ಷೇತ್ರಗಳಲ್ಲಿ ಸಂಚರಿಸಿ ಶೃಂಗೇರಿಯಿಂದ ಶ್ರೀ ಶಾರದಾಂಬೆಯ ದರ್ಶನ ಮುಖಾಂತರ ಜಿಲ್ಲೆಗೆ ಪಾದಾರ್ಪಣೆ ಮಾಡಲಿದೆ. ಮೊದಲ ಹಂತವಾಗಿ ಫೆ.25 ರಿಂದ 26 ಶೃಂಗೇರಿಗೆ ಹಾಗೂ ಫೆ.28 ರಂದು 2ನೇ ಹಂತವಾಗಿ ಚಿಕ್ಕಮಗಳೂರು ಕ್ಷೇತ್ರ ದಲ್ಲಿ ಪ್ರವಾಸ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಶೃಂಗೇರಿಯಿಂದ ಪ್ರಾರಂಭವಾಗುವ ಪಂಚರತ್ನ ಯೋಜನೆಯು ನಂತರ ದಿನದಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಆಗಮಿಸಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬಹಿರಂಗ ಸಭೆ ನಡೆಸಲಾಗುವುದು ಎಂದ ಅವರು ರಾಜ್ಯದಲ್ಲಿ ಎರಡು ರಾಷ್ಟಗಳಿಗಿಂತ ಹೆಚ್ಚು ಶಿಸ್ತುಬದ್ಧವಾಗಿ ಯಾತ್ರೆಯನ್ನು ನಡೆಸಲಾಗುವುದು ಎಂದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ರಂಜನ್‌ಅಜಿತ್‌ಕುಮಾರ್ ಪಂಚರತ್ನ ಯಾತ್ರೆ ಯು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರುಗಳು ಹಾಗೂ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ ಎಂದ ಅವರು ಮೂಡಿಗೆರೆ, ಕಡೂರು ಹಾಗೂ ತರೀಕೆರೆ ಭಾಗದಲ್ಲಿ ಮುಂದಿನ ದಿನಗಳಲ್ಲಿ ಯಾತ್ರೆಯ ಮಾಹಿತಿ ತಿಳಿಸಲಾಗುತ್ತದೆ ಎಂದು ಹೇಳಿದರು.

ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಮಾತನಾಡಿ ಕ್ಷೇತ್ರದಲ್ಲಿ ರಥಯಾತ್ರೆ ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ತಯಾರಿ ನಡೆಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ಸಾಗುವ ಮೂಲಕ ದೊಡ್ಡಮಟ್ಟದಲ್ಲಿ ರಥಯಾತ್ರೆ ಮೂಲಕ ಪ್ರಚಾರ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷ ಹೆಚ್.ಎಸ್.ಮಂಜಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಲಕ್ಷ್ಮಣಗೌಡ, ವಕ್ತಾರ ಹೊಲದಗದ್ದೆ ಗಿರೀಶ್, ಪಕ್ಷದ ಮೂಡಿಗೆರೆ ವಿಧಾನಸಭಾ ಅಭ್ಯರ್ಥಿ ಬಿ.ಬಿ.ನಿಂಗಯ್ಯ, ಯುವಜನತಾದಳ ಜಿಲ್ಲಾಧ್ಯಕ್ಷ ಸಿ.ಹೆಚ್.ಪ್ರೇಮ್‌ಕುಮಾರ್, ನಗರ ಮಹಾ ಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ, ಮುಖಂಡರುಗಳಾದ ನಿಸಾರ್ ಅಹ್ಮದ್, ದೇವಿಪ್ರಸಾದ್, ಡಿ.ಜೆ.ಸುರೇಶ್, ಇರ್ಷಾದ್, ದೇವರಾಜ್‌ಅರಸ್, ಶ್ರೀಮತಿ ಜಯಂತಿ, ನಾಗರತ್ನ ಹಾಗೂ ವಿವಿಧ ಕ್ಷೇತ್ರದ ಮುಖಂಡರುಗಳು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...