Saturday, September 28, 2024
Saturday, September 28, 2024

Aam AAdmi Party ಚಿಕ್ಕಮಗಳೂರಿನಲ್ಲಿ ಆಮ್ ಆದ್ಮಿ ಪಕ್ಷದ ಭ್ರಷ್ಟಮುಕ್ತ ಅಭಿಯಾನ

Date:

Aam AAdmi Party  ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಚಾರ ಆಡಳಿತ ತೊಲಗಿಸುವ ದೃಷ್ಟಿಯಿಂದ ಜಿಲ್ಲಾ ಆಮ್ ಆದ್ಮಿ ಪಕ್ಷದ ಮುಖಂಡರುಗಳು ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ರಸ್ತೆಯನ್ನು ಪರಕೆಯಲ್ಲಿ ಗುಡಿಸುವ ಮೂಲಕ ಭ್ರಷ್ಟಮುಕ್ತ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಡಾ|| ಕೆ.ಸುಂದರಗೌಡ ಸರ್ಕಾರವು ಸಾರ್ವಜನಿಕರ ತೆರಿಗೆಯನ್ನು ಹೆಚ್ಚಿಸುವ ಮೂಲಕ ಭ್ರಷ್ಟಾಚಾರದಲ್ಲಿ ತನ್ನನ್ನು ತೊಡಗಿಸಿಕೊಂಡು ಶೇ.40ರಷ್ಟು ಕಮೀಷನ್ ಪಡೆಯುವ ಮೂಲಕ ಹಿಂದೆಂದು ಕಾಣದ ರೀತಿಯಲ್ಲಿ ಭಾರೀ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.

ರೈತ ಸಮೂಹಕ್ಕೆ ಯಾವುದೇ ಯೋಜನೆಗಳನ್ನು ನೀಡದ ಪರಿಣಾಮ ಕಳೆದ ಮೂರು ವರ್ಷಗಳಿಂದ ಇಲ್ಲಿ ಯವರೆಗೂ ಸುಮಾರು 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಮೆಗೆ ಶರಣಾಗಿ ಜೀವ ಕಳೆದುಕೊಂಡಿದ್ದಾರೆ. ಇದುವರೆಗೂ ಆ ಕುಟುಂಬಗಳಿಗೆ ಸರ್ಕಾರ ಪರಿಹಾರವು ಘೋಷಣೆ ಮಾಡದೇ ಅಸಡ್ಡೆ ವಹಿಸುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ರೈತಾಪಿ ವರ್ಗವನ್ನು ಸರ್ಕಾರಗಳು ಕಡೆಗಣಿಸಿದರೆ ದೇಶದ ಬೆನ್ನಲುಬು ಕಳಚಿದಂತಾಗುತ್ತದೆ ಎಂದ ಅವರು ಇದೇ ರೀತಿ ಸರ್ಕಾರಗಳು ರೈತರ ವಿಷಯದಲ್ಲಿ ಧೋರಣೆ ನಿರ್ಣಯಗಳನ್ನು ಕೈಗೊಂಡಲ್ಲಿ ಮುಂದಿನ ಯುವಪೀಳಿಗೆ, ಪ್ರಜಾಪ್ರಭುತ್ವವನ್ನು ಕಳೆದುಕೊಳ್ಳುವ ಆತಂಕ ಎದುರಾಗಲಿದೆ ಎಂದರು.

Aam AAdmi Party  ಇನ್ನಾದರೂ ಸಾರ್ವಜನಿಕರು ಎಚ್ಚೆತ್ತುಕೊಂಡು ಭ್ರಷ್ಟಮುಕ್ತ ಭಾರತ ನಿರ್ಮಾಣ ಮಾಡಲು ಪಣತೊಡ ಬೇಕು. ದೆಹಲಿ ಮಾದರಿಯ ಸಾರ್ವಜನಿಕರ ತೆರಿಗೆ ಹಣವನ್ನು ಸಾರ್ವಜನಿಕರ ಅಭಿವೃದ್ದಿಗೆ ಬಳಸಿದಂತೆ ರಾಜ್ಯದ ಲ್ಲೂ ಆ ರೀತಿಯ ಆಡಳಿತ ನಡೆಸಲು ಎಎಪಿಗೆ ಸಂಪೂರ್ಣ ಬೆಂಬಲ ಸೂಚಿಸಬೇಕು ಎಂದು ಆಗ್ರಹಿಸಿದರು.

ಎಎಪಿ ಜಿಲ್ಲಾಧ್ಯಕ್ಷ ಹೇಮಂತ್ ಮಾತನಾಡಿ ಹಿರಿಯ ನಾಯಕರುಗಳ ಆದೇಶದಂತೆ ಇಡೀ ರಾಜ್ಯಾದ್ಯಂತ ಪರಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ನಗರಸಭೆ, ತಾಲ್ಲೂಕು ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು ಭಾರೀ ಭ್ರಷ್ಟಚಾರದಲ್ಲಿ ತೊಡಗಿದೆ. ಇವುಗಳಿಂದ ಸಾರ್ವಜನಿಕರು ಮುಕ್ತರಾಗಬೇಕಾದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷವನ್ನು ಬೆಂಬಲಿಸಬೇಕು ಎಂದರು.

ಜಿಲ್ಲೆಯ ಜನಪ್ರತಿನಿಧಿಗಳು ಎಲ್ಲೆಂದರಲ್ಲಿ ಆಸ್ತಿ ಗಳಿಸುವ ಮೂಲಕ ಜನಸಾಮಾನ್ಯರನ್ನು ಇನ್ನಷ್ಟು ಬಡವರನ್ನಾಗಿ ಮಾಡುತ್ತಿದ್ದಾರೆ. ಇವುಗಳನ್ನು ಸಾರ್ವಜನಿಕರು ಸೂಕ್ಮವಾಗಿ ಗಮನಿಸಿ ಮುಂದಿನ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಯನ್ನು ಬೆಂಬಲಿಸಿದರೆ ದೆಹಲಿ ಮಾದರಿಯ ಆಡಳಿತವನ್ನು ನಮ್ಮ ರಾಜ್ಯದಲ್ಲಿ ಅನುಷ್ಟಾನಕ್ಕೆ ತರಲು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಸೈಯದ್ ಜಮೀಲ್ ಅಹ್ಮದ್, ಎಂ.ಪಿ.ಈರೇಗೌಡ, ಪರಮೇಶ್, ಅಂತೋಣಿ, ಪಿಲೋಮಿನಾ, ಜಾನ್, ಪುಟ್ಟರಾಜು, ಪವನ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...