Karnataka State Government ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸರ್ಕಾರ ಹೊಸ ನಿಗಮ ಸ್ಥಾಪಿಸುವ ಘೋಷಣೆ ಮಾಡಿದೆ. “ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ”ದ ಬಗ್ಗೆ ಕರ್ನಾಟಕ ಸರ್ಕಾರವು ಆದೇಶವನ್ನು ಹೋರಾಡಿಸಿದ್ದಕ್ಕೆ ಮತ್ತು ಗಾಣಿಗರ ಅಭಿವೃದ್ಧಿ ನಿಗಮ ಮಂಡಳಿ ಘೋಷಣೆ ಮಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸಮಾಜದ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಗಾಣಿಗ ಅಭಿವೃದ್ಧಿ ನಿಗಮ ಮಂಡಳಿಗಾಗಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಅಖಿಲ ಭಾರತ ಗಾಣಿಗ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಶ್ರೀ ಜಯಬಸವ ಸ್ವಾಮಿಜಿ, ರಾಜ್ಯ ಗಾಣಿಗ ಸಮಾಜದ ನಾಗಪ್ಪ, ಜಿಲ್ಲೆಯ ಗಾಣಿಗ ಸಮಾಜದ ರಾಜಕೀಯ ಮುಖಂಡರು, ಗಾಣಿಗ ಸಮಾಜದ ಬಾಂಧವರು ಶ್ರಮಿಸಿದ್ದಾರೆ.
ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಶೀಘ್ರ ಕಾರ್ಯರೂಪಕ್ಕೆ ಬರುವ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಸೌಲಭ್ಯ ಸಿಗುವಂತೆ ಆಗಬೇಕು. ರಾಜ್ಯ ಸರ್ಕಾರ ಕೂಡಲೇ ನಿಗಮದ ಕಾರ್ಯ ಆರಂಭಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.
Karnataka State Government ನಿಗಮ ಘೋಷಣೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಎಸ್.ಎಸ್.ಜ್ಯೋತಿಪ್ರಕಾಶ್, ಅಧ್ಯಕ್ಷ ಜಿ.ವಿಜಯಕುಮಾರ್, ಉಪಾಧ್ಯಕ್ಷ ಎಸ್.ಎಸ್.ಸತೀಶ್, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕಾನೂರ್, ಅಶೋಕ್.ಎ, ರವಿ, ಭದ್ರಾವತಿ ತಾಲೂಕಿನ ಅಧ್ಯಕ್ಷ ಆನಂದ್ ಕುಮಾರ್, ವಾಗೀಶ್ ಕೋಟಿ, ಮಹೇಶ್ ಕುಮಾರ್, ಶಿಕಾರಿಪುರ ತಾಲೂಕು ಅಧ್ಯಕ್ಷ ಸಿದ್ದಲಿಂಗಪ್ಪ, ಜಯಂತ್, ಶಿವಮೊಗ್ಗ ಜಿಲ್ಲಾ ಗಾಣಿಗ ರೈ ಸಂಘದ ನಿಕಟಪೂರ್ವ ಅಧ್ಯಕ್ಷ ಹೆಚ್.ಸುಬ್ಬಯ್ಯ, ಅಧ್ಯಕ್ಷ ಎಂ.ನಾಗರಾಜ್, ಕಾರ್ಯದರ್ಶಿ ಎಚ್.ಮಂಜುನಾಥ್ ಗಾಣಿಗ, ಖಜಾಂಚಿ ಡಾ.ಶಿವಕುಮಾರ್.ಕೆ, ನಿರ್ದೇಶಕ ಜನಾರ್ಧನ್, ನಾಗೇಶ್.ಎಸ್.ಜಿ ಮತ್ತು ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.