Deputy Commissioner Shimoga ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕೆಳಕಂಡಂತೆ ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೊರಡಿಸಿದ್ದಾರೆ.
ಶೂನ್ಯ ಸಂಚಾರ ರಸ್ತೆ ಮಾರ್ಗ:
Deputy Commissioner ದಿನಾಂಕ: 26-06-2023 ಮತ್ತು 27-02-2023 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.
ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ):
• ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು.
• ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.
• ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
• ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.
ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ (ದಿ: 27-02-2023 ರಂದು ಮಾತ್ರ):
• ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್-ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.
• ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೇಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದರಿಂದ ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
• ಸಾಗರ, ಶಿಕಾರಿಪುರ, ಸೊರಬ, ಹೊಸನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್.ರಸ್ತೆ-ಎಎ ಸರ್ಕಲ್-ಶಂಕರಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಫೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
• ಶಿಕಾರಿಪುರ, ಹೊನ್ನಾಳಿ, ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
• ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂಆರ್‍ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏಪ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು
• ತರೀಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ನಗರದ ಕೃಷ್ಣಪ್ಪ ಸರ್ಕಲ್‍ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್-ಹೆಚ್.ಕೆ.ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು ಎಂದು ತಿಳಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.