Tuesday, March 24, 2026
Tuesday, March 24, 2026

Chikkamagalur taxi services ಚಿಕ್ಕಮಗಳೂರಿನಲ್ಲಿ ಸೆಲ್ಫ್ ಬೈಕ್ ಗಳ ಹಾವಳಿಯಿಂದ ಟ್ಯಾಕ್ಸಿ, ಆಟೋ ಚಾಲಕರಿಗೆ ತೊಂದರೆ

Date:

Chikkamagalur taxi services ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೀಗ ಸೆಲ್ಪ್ ಬೈಕ್‌ಗಳ ಹಾವಳಿ ಹೆಚ್ಚಾಗಿರುವ ಕಾರಣ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ತೀವ್ರ ತೊಂದರೆಯಾಗುತ್ತಿದ್ದು ಕೂಡಲೇ ನಗರದಲ್ಲಿ ಸೆಲ್ಪ್ ಬೈಕ್‌ಗಳ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಬೇಕು ಎಂದು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘ ಹಾಗೂ ಜಿಲ್ಲಾ ಟ್ಯಾಕ್ಸಿ ಯೂನಿಯನ್ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವನ್ನು ಒತ್ತಾಯಿಸಿದೆ.

ಈ ಸಂಬಂಧ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಮನವಿ ಸಲ್ಲಿಸಿದ ಆಟೋ ಮತ್ತು ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರುಗಳು ಸೆಲ್ಪ್ ಬೈಕ್‌ಗಳ ಪರವಾನಗೆ ನೀಡುವುದರಿಂದ ಸ್ಥಳೀಯವಾಗಿ ಕಾರ್ಯನಿರ್ವಹಿ ಸುತ್ತಿರುವ ಚಾಲಕರಿಗೆ ತೀವ್ರ ತೊಂದರೆಯಾಗಲಿದೆ ಎಂದು ಹೇಳಿದರು.

Chikkamagalur taxi services ಈ ವೇಳೆ ಮಾತನಾಡಿದ ಆಟೋ ಸಂಘದ ಕಾರ್ಯದರ್ಶಿ ಜಗದೀಶ್ ಕೋಟೆ ನಗರದಲ್ಲಿ ನಾಲ್ಕು ಸಾವಿರ ಆಟೋ ಚಾಲಕರುಗಳು ವಾಹನವನ್ನು ನಂಬಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಸೆಲ್ಪ್ ಬೈಕ್‌ಗಳ ಹಾವಳಿ ಹೆಚ್ಚಾಗಿರುವ ಪರಿಣಾಮ ದಿನನಿತ್ಯದ ದುಡಿಮೆಗೂ ಸಂಕಷ್ಟ ಎದುರಾಗಿ ಪರಿತಪಿಸುವಂತಾಗಿದೆ ಎಂದು ಹೇಳಿದರು.

ಸುಮಾರು ಹತ್ತು ಲಕ್ಷ ಜನಸಂಖ್ಯೆ ಹೊಂದಿರುವ ಜಿಲ್ಲೆಗೆ ಮಾತ್ರ ಸೆಲ್ಪ್ ಬೈಕ್‌ಗಳಿಗೆ ಅನುಮತಿಯಿದೆ. ಆದರೆ ಚಿಕ್ಕಮಗಳೂರು ತಾಲ್ಲೂಕಿನಲ್ಲಿ 50 ಸಾವಿರ ಜನಸಂಖ್ಯೆ ಹೊಂದಿರುವ ಕಾರಣ ಸೆಲ್ಪ್ ಬೈಕ್‌ಗಳಿಗೆ ಅನುಮತಿ ನೀಡಲು ಅವಕಾಶವಿರುವುದಿಲ್ಲ.

ಆ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಬೈಕ್‌ಗಳಿಗೆ ಅನುಮತಿ ನೀಡುವುದನ್ನು ತಡೆಹಿಡಿದು ಬಡ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.

ಕಳೆದ ಕೊರೋನಾ ಸಂಕಷ್ಟದಿಂದ ಚಾಲಕರು ಸ್ವಲ್ಪಮಟ್ಟಿನಲ್ಲಿ ಚೇತರಿಕೆ ಕಾಣುತ್ತಿದ್ದಾರೆ. ಈ ನಡುವೆೆ ಪೆಟ್ರೋಲ್, ಡೀಸೆಲ್ ದರ ಹಾಗೂ ವಾಹನಗಳ ಬಿಡಿಭಾಗಗಳು ಏರಿಕೆಯಾಗಿದೆ. ಸುಮಾರು 250 ಸೆಲ್ಪ್ ಬೈಕ್‌ಗಳು ನಗರದಲ್ಲಿ ಸಂಚರಿಸುತ್ತಿದ್ದು ಇದರಿಂದ ಆಟೋ ಹಾಗೂ ಟ್ಯಾಕ್ಸಿ ಚಾಲಕರುಗಳಿಗೆ ಜೀವನ ನಡೆಸಲು ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಟ್ಯಾಕ್ಸಿ ಯೂನಿಯನ್ ಅಧ್ಯಕ್ಷ ಮಂಜೇಗೌಡ ಮಾತನಾಡಿ ನಗರದಲ್ಲಿ ಒಂದು ಸಾವಿರ ಟ್ಯಾಕ್ಸಿ ಚಾಲಕರು, ಮಾಲೀಕರು ವಾಹನವನ್ನು ನಂಬಿಕೊಂಡು ಬದುಕುತ್ತಿದ್ದು ಇದೀಗ ಸೆಲ್ಪ್ ಬೈಕ್‌ಗಳ ಹಾವಳಿಯಿಂದ ತೊಂದರೆ ಎದುರಾಗಿರುವ ಕಾರಣ ಕೂಡಲೇ ಸಾರಿಗೆ ಪ್ರಾಧಿಕಾರದ ಅಧಿಕಾರಿಗಳು ಸೆಲ್ಪ್ ಬೈಕ್‌ಗಳಿಗೆ ಕಡಿವಾಣ ಹಾಕಿ ಟ್ಯಾಕ್ಸಿ ಚಾಲಕರಿಗೆ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸಾರಿಗೆ ಪ್ರಾಧಿಕಾರದ ಈ ನಿರ್ಧಾರದಿಂದ ಚಾಲಕರಿಗೆ ಮರಣ ಶಾಸನ ಬರದಂತಾಗಿ ಜೀವನ ನಡೆಸಲು ದುಸ್ಥಿತಿಗೆ ತಂದೊಡ್ಡಿದೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿರ್ವಾಯತೆ ಉಂಟಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಆಟೋ ಸಂಘದ ಅಧ್ಯಕ್ಷ ಆರ್.ರಾಮೇಗೌಡ, ಉಪಾಧ್ಯಕ್ಷ ಎಸ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಹೆಚ್.ಸಿ.ರಾಘವೇಂದ್ರ, ಕಾರ್ಯಾಧ್ಯಕ್ಷ ಉದಯ್‌ಕುಮಾರ್, ಟ್ಯಾಕ್ಸಿ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸತೀಶ್‌ಕುಮಾರ್, ಚಾಲಕರಾದ ದಿನೇಶ್, ಭರತ್, ಆದರ್ಶ, ವಸಂತ್, ಸುಶೀಲ್, ಕುಮಾರ್, ವಿನೋದ್, ರಮೇಶ್, ಶಂಭು ಮತ್ತಿತರರು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...