VISL Industry ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಐಎಸ್‌ಎಲ್)ಯನ್ನು ಮುಚ್ಚುವ ನಿರ್ಧಾರ ಕೈಬಿಟ್ಟು, ಬಂಡವಾಳ ತೊಡಗಿಸಿ ಪುನಶ್ಚತನಗೊಳಿಸಬೇಕು ಎಂದು ಆಗ್ರಹಿಸಿ ಕಾರ್ಮಿಕರು ಹಾಗೂ ನಗರದ ವಿವಿಧ ಸಂಘಟನೆಗಳು ಕರೆ ನೀಡಿದ್ದ ‘ಭದ್ರಾವತಿ ಬಂದ್’ ಯಶಸ್ವಿಯಾಗಿದೆ.
VISL Industry ಬಸ್ ನಿಲ್ದಾಣದ ಎದುರಿನ ವೃತ್ತ ಹಾಗೂ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನ ಕಾರರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ವ್ಯಾಪಾರಸ್ಥರು ಸ್ವಯಂ- ಪ್ರೇರಿತರಾಗಿ ಅಂಗಡಿಗಳನ್ನು ಬಂದ್ ಮಾಡಿದರು.
ಬೆಳಿಗ್ಗೆಯಿಂದಲೇ ಬಂದ್‌ಗೆ ವ್ಯಾಪಕ ಪ್ರತಿಕ್ರಿಯೆ ದೊರೆಯಿತು.
ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಬಸ್ ಮತ್ತು ಆಟೋ ಸಂಚಾರ ಕಂಡುಬರಲಿಲ್ಲ. ಸರ್ಕಾರಿ ಕಚೇರಿಗಳು ತೆರೆದಿದ್ದರೂ ನೌಕರರು ಬರಲಿಲ್ಲ. ಶಾಲೆ ಕಾಲೇಜುಗಳನ್ನೂ ಬಂದ್ ಮಾಡಲಾಗಿತ್ತು.
ವಿಐಎಸ್ ಎಲ್ ಗೇಟ್ ಮುಂಭಾಗದಿಂದ ಬಿ.ಎಚ್.ರಸ್ತೆ, ರಂಗಪ್ಪ ವೃತ್ತದ ಮೂಲಕ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ, ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.