Tuesday, October 1, 2024
Tuesday, October 1, 2024

Sarji Foundation Shimogga ಮನುಷ್ಯ ಜನ್ಮ ಬೇರೆಲ್ಲಾ ಜೀವಿಗಳಿಗಿಂತ ಶ್ರೇಷ್ಠ – ಡಾ.ಧನಂಜಯ ಸರ್ಜಿ

Date:

Sarji Foundation Shimogga ಮೆದುಳು ಮಾನವನ ಅತ್ಯಂತ ಶ್ರೇಷ್ಠ ಅಂಗವಾಗಿದ್ದು, ಸಂಪೂರ್ಣ ನಡತೆಯನ್ನು ನಿಗ್ರಹಿಸುತ್ತದೆ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್‌ನಲ್ಲಿ ಪಾಥ್‌ವೇಸ್‌ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

Sarji Foundation Shimogga  ಮನುಷ್ಯನ ದೇಹವು ಭಗವಂತನಿಂದ ರಚಿಸಲ್ಪಟ್ಟಿದ್ದು, ಮೆದುಳು ಶ್ರೇಷ್ಠ ಅಂಗವಾಗಿದ್ದು, ಹಲವಾರು ವಿಶೇಷತೆಗಳನ್ನು ಹೊಂದಿರುವ ಮಾನವರಾದ ನಾವು ಬುದ್ದಿವಂತಿಕೆಯಿಂದಾಗಿ ಬೇರೆಲ್ಲಾ ಜೀವಿಗಳಿಗಿಂತಲೂ ಸರ್ವ ಶ್ರೇಷ್ಠರಾಗಿದ್ದೇವೆ. ನಮಗಿರುವ ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿಗಳಿಗೆ ಮೆದುಳಿನ ಬಗ್ಗೆ ಸಂಪೂರ್ಣ ವೈಜ್ಞಾನಿಕ ಮಾಹಿತಿ ನೀಡಿದರು.

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ.ಎ ಎಸ್‌ ಚಂದ್ರಶೇಖರ್‌ ಮಾತನಾಡಿ, ವಿದ್ಯೆಯೇ ಸರ್ವಸ್ವ, ವಿದ್ಯಾರ್ಥಿಗಳೇ ನಮ್ಮ ಮುಂದಿನ ಆಸ್ತಿ. ಸಮಯವನ್ನು ಹರಣ ಮಾಡದೇ ಭವಿಷ್ಯದ ಬಗ್ಗೆ ಉನ್ನತ ಗುರಿ ಹೊಂದುವ ಮೂಲಕ ಯಶಸ್ಸು ಕಾಣುವಂತೆ ಸಲಹೆ ನೀಡಿದರು.

ನಂತರ ಪಾಥ್ವೇಸ್‌ನ ಹಿರಿಯ ವಿದ್ಯಾರ್ಥಿ ಶಿವಕುಮಾರ್‌ ಅವರು ತಮ್ಮ ಹಿಂದಿನ ದಿನಗಳನ್ನು ಮೆಲಕು ಹಾಕಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎನ್‌ ರಾಜೇಶ್ವರಿ ವಹಿಸಿದ್ದರು, ಪಾಥ್ವೇಸ್‌ ಘಟಕದ ನಿರ್ದೇಶಕರಾದ ಪ್ರೊ. ಸಿ.ಕೆ.ರಮೇಶ್‌, ಪ್ರೊ. ಎಂ ಕೆ ವೀಣಾ, ಪ್ರೊ. ಕೆ.ಬಿ.ಧನಂಜಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...