Tuesday, October 1, 2024
Tuesday, October 1, 2024

National Science Day ವಿದ್ಯಾರ್ಥಿಗಳು ಅವಕಾಶಗಳನ್ನ ಸದುಪಯೋಗಪಡಿಸಿಕೊಳ್ಳಿ- ಡಿ.ಎಸ್.ಅರುಣ್

Date:

National Science Day ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು,, ಶಿವಮೊಗ್ಗ, ಸಹ್ಯಾದ್ರಿ ವಿಜ್ಞಾನ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಪರಿಸರ(ರಿ), ಶಿವಮೊಗ್ಗ ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್ ನಾವು ಚಿಕ್ಕಾನಿಂದಲೂ ವಿಜ್ಞಾನ ದಿನಾಚರಣೆಯನ್ನು ಆಚರಿಸಿಕೊಂಡು ಬಂದಿದ್ದೇವೆ. ವಿಜ್ಞಾನ ದಿನಾಚರಣೆ ಎಂದಾಕ್ಷಣ ನಮಗೆ ನೆನಪಿಗೆ ಬರುವುದು ಸರ್ ಸಿ. ವಿ.ರಾಮನ್. 1986ರಲ್ಲಿಯೇ ಫೆಬ್ರವರಿ 28 ನ್ನು ವಿಜ್ಞಾನ ದಿನವನ್ನಾಗಿ ಘೋಷಣೆ ಮಾಡಿದರೂ, 1987ರಿ೦ದ ಪ್ರತಿ ವರ್ಷ ಫೆಬ್ರವರಿಯನ್ನು ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ.

ಈ ವರ್ಷದ ಶೀರ್ಷಿಕೆ “ಜಾಗತಿಕ ಯೋಗ ಕ್ಷೇಮಕ್ಕಾಗಿ ಜಾಗತಿಕ ವಿಜ್ಞಾನ” ಎಂಬುದಾಗಿದೆ.

ಪ್ರತಿನಿತ್ಯ ನಮ್ಮ ಭಾರತೀಯ ವಿಜ್ಞಾನಿಗಳು ಒ೦ದಲ್ಲ ಒ೦ದು ಸ೦ಶೋಧನೆಯಲ್ಲಿ ತೊಡಗಿಸಿಕೊ೦ಡು, ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಆಖಆಔ, ISಖಔ ದ೦ತಹ ಸ೦ಸ್ಥೆಗಳಿ೦ದ ಪ್ರತಿನಿತ್ಯ ಹೊಸಹೊಸ ಆವಿಷ್ಕಾರಗಳು ನಡೆಯುತ್ತಲೇ ಇವೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಮಾಡಿಕೊ೦ಡು, ಸ೦ಶೋಧನೆಯಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು.

ಕುವೆ೦ಪು ವಿಶ್ವವಿದ್ಯಾಲಯದ ಗಣಿತ ಶಾಸ್ತç ವಿಭಾಗದ ಪ್ರೊ.ಗಿರೀಶ್ ಬಿ.ಜೆ., ಇವರು ವೈಜ್ಞಾನಿಕ ಪರ೦ಪರೆ ಬೆಳೆದು ಬ೦ದ ರೀತಿ ಮತ್ತು ನಮಗಿರುವ ಸವಾಲುಗಳು, ಅವುಗಳನ್ನು ಎದುರಿಸುವ ತ೦ತ್ರಜ್ಞಾನದ ಅವಶ್ಯಕತೆಗಳು, ಸ೦ಶೋಧನೆಯಲ್ಲಿ ಇರುವ ಅವಕಾಶಗಳನ್ನು ಕುರಿತು ಮಾತನಾಡಿದರು.

ಪ್ರಾ೦ಶುಪಾಲರಾದ ಪ್ರೊ. ರಾಜೇಶ್ವರಿ ಮಾತನಾಡಿ ಆರೋಗ್ಯ ಕ್ಶೇತ್ರದಲ್ಲಿ ಆಗಿರುವ ಸುಧಾರಣೆಗಳು ವೈಜ್ಞಾನಿಕ ಅನ್ವೇಷಣೆಗಳು ಮತ್ತು ಅದರ ಅನುಕೂಲಗಳ ಬಗ್ಗೆ ತಿಳಿಸಿದರು.

National Science Day ಕ.ರಾ.ವಿ.ಪ. ನಿರ್ದೇಶಕರಾದ ಇ೦ಜಿನೀಯರ್ ಸೋಮಶೇಖರ ಅವರು, ಸ೦ಶೋಧನಾ ಕ್ಷೇತ್ರದಲ್ಲಿರುವ ನ್ಯೂನ್ಯತೆಗಳು, ವೈಫಲ್ಯತೆಗಳು, ಸವಾಲುಗಳನ್ನು ಎದುರಿಸಲು ಅವಶ್ಯಕವಾದ ಮಾರ್ಗೋಪಾಯಗಳನ್ನು ಕ೦ಡುಕೊಳ್ಳಬೇಕೆ೦ದು ನುಡಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪರಿಸರ(ರಿ), ಸ೦ಸ್ಥೆಯ ಗೌರವಾಧ್ಯಕ್ಷರಾದ ಶ್ರೀ ಜ್ಯೋತಿಪ್ರಕಾಶ್‌ರವರು ಮಾತನಾಡಿ, ಎಲ್ಲಾ ಕ್ಷೇತ್ರಗಳಲ್ಲೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ನಮ್ಮ ದೇಶದ ಸರ್ವತೋಮುಖ ಅಭಿವೃದ್ಧಿಗೆ ಯುವ ಜನತೆ ಕೈಜೋಡಿಸಬೇಕೆ೦ದು ಕರೆ ನೀಡಿದರು.

ಕ.ರಾ.ವಿ.ಪ. ಜಿಲ್ಲಾಧ್ಯಕ್ಷರಾದ ಡಾ.ನಾಗರಾಜ್ ಅವರು, ಪರಿಸರ, ಭಾರತದಲ್ಲಿ ಸ೦ಶೋಧನೆಗೆ ಅತಿ ಹೆಚ್ಚಿನ ಅವಕಾಶಗಳಿದ್ದು, ನಮ್ಮ ಘನ ಸರ್ಕಾರ ಗುಣಾತ್ಮಕ ಸ೦ಶೋಧನೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ. ಪ್ರತಿ ವರ್ಷ ಕಾಡ್ಗಿಚ್ಚಿನಿ೦ದ ಅರಣ್ಯ ನಾಶವಾಗುತ್ತಿದ್ದು, ಇದನ್ನು ತಡೆಯಲು ಏರಿಯಲ್ ಪ್ಲೇಟ್ ಬಳಸುವ ಮೂಲಕ ಕಾಡಿನ ಬೆ೦ಕಿಯನ್ನು ಆರಿಸಿ ಜೀವ ವೈವಿಧ್ಯವನ್ನು ಉಳಿಸಬೇಕಾಗಿದೆ. ಸರ್ಕಾರವು ಸ೦ಶೋಧನೆಗೆ ಹೆಚ್ಚಿನ ಆರ್ಥಿಕ ನೆರವು ನೀಡುವುದರ ಮೂಲಕ ಪ್ರೋತ್ಸಾಹಿಸಬೇಕಾಗಿದೆ ಎ೦ದು ತಿಳಿಸಿದರು.

ವೇದಿಕೆಯಲ್ಲಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಂಶು ಪ್ರೊ. ಎಂ. ಕೆ. ವೀಣಾ, ಶ್ರೀ ಲೋಕೇಶ್ವರಪ್ಪ, ಕ.ರಾ.ವಿ.ಪ. ಕಾರ್ಯದರ್ಶಿ, ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...