Friday, November 22, 2024
Friday, November 22, 2024

Home Minister Araga Jnanendra ಅರ್ಹ ಫಲಾನುಭವಿಗಳನ್ನ ಗುರುತಿಸಿ ಭೂಮಿ ಹಕ್ಕುಪತ್ರ ನೀಡಲಾಗಿದೆ- ಆರಗ ಜ್ಞಾನೇಂದ್ರ

Date:

Home Minister Araga Jnanendra ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಆಡಳಿತಾರೂಢ ಸರ್ಕಾರವು ಸುಮಾರು 3250ಕೋ. ರೂ.ಗಳಿಗೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದೆ. ರಸ್ತೆ, ಸೇತುವೆ, ಕುಡಿಯುವ ನೀರು ಸೇರಿದಂತೆ ಅನೇಕ ಮಹತ್ವದ ಹಾಗೂ ಜನರ ನಿರೀಕ್ಷೆಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗಜ್ಞಾನೇಂದ್ರ ಅವರು ಹೇಳಿದರು.

ಶಿವಮೊಗ್ಗ ಸಮೀಪದ ಮತ್ತೂರಿನಲ್ಲಿ ರೈತರಿಗೆ ಭೂಮಾಲೀಕತ್ವದ ಹಕ್ಕುಪತ್ರ ವಿತರಿಸಿ ಮಾತನಾಡುತ್ತಿದ್ದರು. ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಹಲವು ದಶಕಗಳಿಂದ ಉಳುಮೆ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಪಕ್ಷಾತೀತವಾಗಿ ಹಕ್ಕುಪತ್ರಗಳನ್ನು ವಿತರಿಸಲಾಗಿದೆ ಎಂದವರು ನುಡಿದರು.

ತೀರ್ಥಹಳ್ಳಿ ತಾಲೂಕು ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಗರ್‌ಹುಕುಂ ಸಮಿತಿಯನ್ನು ಹೆಚ್ಚುವರಿಯಾಗಿ ಹೋಬಳಿ ಮಟ್ಟದಲ್ಲಿ ರಚಿಸಲು ಸರ್ಕಾರದಿಂದ ಅನುಮತಿ ಕೊಡಿಸಿ, ಸುತ್ತಮುತ್ತಲ ಪ್ರದೇಶದ 5-6 ಗ್ರಾಮಗಳ ಸದಸ್ಯರನ್ನೊಳಗೊಂಡತೆ ಸಮಿತಿಯನ್ನು ರಚಿಸಿ, ಅವರ ಮೂಲಕ ಕಾಲಕಾಲಕ್ಕೆ ಸಭೆಗಳನ್ನು ನಡೆಸಿ, ದಾಖಲೆಗಳನ್ನು ಪರಿಶೀಲಿಸಲಾಗಿದೆ. ನಂತರ ಅರ್ಹರಾದ 73ಜನ ಫಲಾನುಭವಿಗಳಿಗೆ ಹಕ್ಕುಪತ್ರದೊಂದಿಗೆ ತಹಶೀಲ್ದಾರರ ಕಚೇರಿಯಿಂದ ನೀಡಬಹುದಾದ ಎಲ್ಲಾ ಅಧಿಕೃತ ದಾಖಲೆಗಳನ್ನು ನೀಡಲಾಗಿದೆ ಎಂದರು.

ಹಸಿದವನಿಗೆ ಅನ್ನ ಉಣಿಸುವ, ದೇಶದ ಬೆನ್ನೆಲುಬಾಗಿರುವ ರೈತರು ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು. ಅಂತಹ ರೈತರಿಗೆ ಹಕ್ಕುಪತ್ರ ವಿತರಿಸುತ್ತಿರುವು ನನ್ನ ಪೂರ್ವ ಜನ್ಮದ ಪುಣ್ಯ ಎಂದು ಭಾವಿಸುತ್ತೇನೆ. ರೈತರಿಗೆ ಭೂಮಿ ಎಂಬ ವಿಷಯವೇ ಭಾವನಾತ್ಮಕ ಸಮಾಧಾನವನ್ನು ನೀಡಲಿದೆ. ರೈತರಿಗೆ ಸಂತೋಷ ನೀಡುವ, ಬದುಕಿಗೆ ಶಕ್ತಿ ನೀಡುವ, ನೆಮ್ಮದಿಯ ವಾತಾವರಣ ನಿರ್ಮಿಸುವ ಕಾರ್ಯದಲ್ಲಿ ಭಾಗವಹಿಸಿರುವುದು ನನಗೆ ಸಂತೃಪ್ತಿ ಹಾಗೂ ರೈತರನ್ನು ಭೂಮಾಲೀಕರನ್ನಾಗಿ ಮಾಡಿದ ಸಾರ್ಥಕಭಾವ ಇದೆ ಎಂದರು.
ಈ ಹಿಂದೆಯೂ ಅನೇಕ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿತ್ತು. ಇನ್ನು ಉಳಿದ ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲಿಸಿ, ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಸೂಚಿಸಲಾಗಿದೆ ಎಂದ ಅವರು, ಹಕ್ಕು ಪತ್ರ ವಿತರಿಸುವಲ್ಲಿ ಅನೇಕ ತೊಡಕುಗಳನ್ನು ನಿವಾರಿಸಿ, ಕಂದಾಯ ಇಲಾಖಾ ಅಧಿಕಾರಿಗಳ ಸಹಕಾರ ಪಡೆದು, 73 ಜನರಿಗೆ ಹಕ್ಕುಪತ್ರ ವಿತರಿಸಲು ಸಹಕಾರಿಯಾಗಿರುವ ಸಮಿತಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಮುಂದಿನ ಒಂದು ವಾರದೊಳಗಾಗಿ 400ಜನರಿಗೆ 94ಸಿ ಯೋಜನೆಯಡಿ ಮನೆಯ ಹಕ್ಕುಪತ್ರ ನೀಡಲು ಸೂಚಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸೃಜಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

Home Minister Araga Jnanendra ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್, ತಹಶೀಲ್ದಾರ್ ಗಣೇಶ್, ಶಿವನಂಜಪ್ಪ, ಶಿವಮೂರ್ತಿ, ಈಶ್ವರಪ್ಪ, ಶ್ರೀಮತಿ ರೇವತಿ, ಸುರೇಶ್‌ಹೊಸಕೊಪ್ಪ ಸೇರಿದಂತೆ ಗ್ರಾಮದ ಹಲವು ಮುಖಂಡರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...