Women’s Day ಶಿವಮೊಗ್ಗ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಾರ್ಚ್-8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಮಾ. 7 ಮತ್ತು 8ರಂದು ಜಿಲ್ಲೆಯ ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಮಾ. 7 ರಂದು ಕ್ರೀಡಾ ಸ್ಪರ್ಧೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್, ಥ್ರೋಬಾಲ್, ಫುಟ್‌ಬಾಲ್, ಕಬಡ್ಡಿ, ಷಟಲ್ ಬ್ಯಾಡ್ಮಿಂಟನ್, ಟೆನ್ನಿಸ್ ಸಿಂಗಲ್ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ಮಾ. 8 ರಂದು ಅಥ್ಲೇಟಿಕ್ (100 ಮೀ, 200 ಮೀ, 400ಮೀ, 800ಮೀ, ಉದ್ದ ಜಿಗಿತ ಮತ್ತು ಗುಂಡು ಎಸೆತ) ಹಗ್ಗಜಗ್ಗಾಟ, ಯೋಗಾಸನ ಮನೋರಂಜನಾ ಕ್ರೀಡೆಗಳಾದ ಗೋಣಿಚೀಲ ಓಟ, ಇಟ್ಟಿಗೆ ನಡಿಗೆ, ಬಾಂಬ್ ಇನ್‌ದಿ ಸಿಟಿ, ನಿಧಾನ ಸೈಕಲ್ ರೇಸ್, ಪಗಡೆ ಕ್ರಿಕೆಟ್ ಹಾಗೂ ಭೌದ್ಧಿಕ ಸ್ಫರ್ದೆಗಳಲ್ಲಿ ರಸಪ್ರಶ್ನೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿಲಾಗಿದೆ.
ಈ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಾ. 7ರಂದು ಬೆಳಗ್ಗೆ 9.30ಕ್ಕೆ ನೋಂದಾವಣೆ ಮಾಡಿಕೊಳ್ಳುವುದು. ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, ದೂ.ಸಂ.:08182-223328 ೦ ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Women’s Day ವಿ.ಸೂ.:ಮಹಿಳಾ ದಿನಾಚರಣೆ ಪ್ರಯುಕ್ತ ಮಾ. 8ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ವ್ಯಾಪ್ತಿಗೆ ಒಳಪಡುವ ಎಲ್ಲಾ ಜಿಮ್, ಟೆನ್ನಿಸ್ ಅಂಕಣ, ಈಜುಕೊಳ ಹಾಗೂ ಷಟಲ್ ಬ್ಯಾಡ್ಮಿಂಟನ್ ಅಂಕಣಗಳನ್ನು ಮಹಿಳೆಯರಿಗೆ ಷರತ್ತಿಗೊಳಪಟ್ಟು ಬೆಳಗ್ಗೆ 9ರಿಂದ ಸಂಜೆ 5 ರವರೆಗೆ ಉಚಿತವಾಗಿ ನೀಡಲಾಗುತ್ತದೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.