JDS ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಚಿಕ್ಕಮಗಳೂರು ಜೆಡಿಎಸ್ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಅವರು ಕ್ಷೇತ್ರ ಬದಲಾವಣೆ ಕುರಿತು ಹರಿದಾಡುತ್ತಿರುವ ಸುದ್ದಿಗಳು ಸುಳ್ಳಾಗಿವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ರಾಜ್ಯಾಧ್ಯಕ್ಷರ ಅಧಿಕೃತ ಆದೇಶದಂತೆ ಅಭ್ಯರ್ಥಿಯ ಪಟ್ಟಿ ಬಿಡುಗಡೆಯಾಗಿದೆ. ಆದರೆ ಕೆಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆಯಾಗಲಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನತೆಗೆ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
JDS ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆಗಮಿಸಿದ ವೇಳೆಯಲ್ಲಿ ಅತ್ಯಂತ ಹೆಚ್ಚು ಮಂದಿ ಅಭಿಮಾನಿಗಳು ಮತ್ತು ಕಾರ್ಯಕರ್ತರುಗಳು ಬಂದಿರುವುದು ಸಹಿಸಿಕೊಳ್ಳಲಾಗದ ಕೆಲವು ಮಂದಿ ಅಭ್ಯರ್ಥಿ ವಿರುದ್ಧ ಅಪಪ್ರಚಾರಗೊಳಿಸಲು ಕ್ಷೇತ್ರ ಬದಲಾವಣೆಯಾಗಲಿದೆ ಎಂದು ಸುಳ್ಳು ಸುದ್ದಿಗಳನ್ನು ಹರಡಿಸ ಲಾಗುತ್ತಿದೆ ಎಂದು ದೂರಿದ್ದಾರೆ.
ಒಂದು ವೇಳೆ ಕ್ಷೇತ್ರದ ಬದಲಾವಣೆಯಾಗಬೇಕಾದರೆ ರಾಜ್ಯ ನಾಯಕರುಗಳು ಮಾತನಾಡಬೇಕೆ ಹೊರತು ಸ್ಥಳೀಯರಲ್ಲ. ಆದ್ದರಿಂದ ಪ್ರಸ್ತುತ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳಾಗಿಲ್ಲ. ಕಾರ್ಯಕರ್ತರು ಹಾಗೂ ಮುಖಂಡರುಗಳು ಸಾಮಾಜಿಕ ಜಾಲತಾಣಗಳಿಗೆ ಹೆಚ್ಚು ತಲೆಕೆಡಿಸಿಕೊಳ್ಳ ಬಾರದು ಎಂದು ತಿಳಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.