Bommai ಸತ್ಯ, ಧರ್ಮದ ಮಾರ್ಗದಲ್ಲಿ ನಡೆದು ಸಾರ್ಥಕತೆ ಕಂಡುಕೊಂಡವನು ಧೀಮಂತ ಸಾಧಕ ಎಂದೆನಿಸಿಕೊಳ್ಳುತ್ತಾನೆ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹೇಳಿದರು.
ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗ ಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರ ಸ್ವಾಮಿ ರಥೋತ್ಸವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಒಂದು ಸಮುದಾಯದ ಓಲೆಕಿಗಾಗಿ ಭಾರತೀಯ ಸಂಸ್ಕೃತಿಯ ಪ್ರತೀಕವಾದ ಕುಂಕುಮ, ಕೇಸರಿ ಬಟ್ಟೆಯನ್ನ ಬೇಡ ಎಂದು ಎಸೆದು ಕೆಲ ರಾಜಕಾರಣಿಗಳು, ಚುನಾವಣೆ ಸಮೀಪಿಸುತ್ತಿದ್ದಂತೆ ಮಠ ಮಂದಿರಗಳಿಗೆ ಭೇಟಿ ನೀಡುವ ನಾಟಕವಾಡುತ್ತಿದ್ದಾರೆ ಎಂದು ಪ್ರತಿಪಕ್ಷದ ಹೆಸರನ್ನು ಹೇಳದೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ರೇಣುಕಾಚಾರ್ಯರ ವಿಚಾರಧಾರೆಗಳು ಎಲ್ಲಾ ಕಾಲಗಳಿಗೂ ಪ್ರಸ್ತುತವಾಗಿವೆ. ಅಪೂರ್ವ ಗ್ರಂಥ ಸಿದ್ಧಾಂತ ಶಿಖಾಮಣಿಯಲ್ಲಿ ಅದ್ಭುತವಾದ ಅಂತರ್ಗತ ಶಕ್ತಿ ಇದೆ ಎಂದು ಹೇಳಿದರು.
ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಸ್ವೀಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಾತನಾಡಿ, ಮಠಮಾನ್ಯಗಳು ಅನೇಕ ವರ್ಷಗಳಿಂದ ಜನರ ಸೇವೆಯಲ್ಲಿ ತೊಡಗಿವೆ. ಸರ್ಕಾರ ಮಾಡಬೇಕಾದ ಕೆಲಸಗಳನ್ನ ಮಠಗಳು ಮಾಡುತ್ತಿವೆ. ಅದನ್ನ ಅರಿತು ನನ್ನ ಅವಧಿಯಲ್ಲಿ ಅವುಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಶಕ್ತಿ ತುಂಬುವ ಕೆಲಸ ಮಾಡಿದ್ದ ಸಂತೃಪ್ತಿ ನನಗಿದೆ ಎಂದರು.
Bommai ಯಾವುದೇ ಜಾತಿ, ಪಂಗಡ, ಸಮುದಾಯಗಳೆಂಬ ಭೇದವಿಲ್ಲದೆ ಅನೇಕ ನಿಗಮ ಮಂಡಳಿಗಳನ್ನು ಸ್ಥಾಪನೆ ಮಾಡಿ ಸಮಾಜದ ಕಟ್ಟ ಕಡೆಯ ವ್ಯಕ್ತಿ ಗೂ ಸೌಲಭ್ಯಗಳನ್ನು ತಲುಪಿಸುವಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಗದ್ಗುರು ಡಾ. ವೀರ ಸೋಮೇಶ್ವರ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಹಂಪ ಸಾಗರದ ಶ್ರೀ ವಿಮಲ ರೇಣುಕ ವೀರ ಮುಕ್ತಿಮುನಿ ನೇತೃತ್ವ ವಹಿಸಿದ್ದರು. ಸಚಿವ ಸಿ. ಸಿ ಪಾಟೀಲ, ಕುಮಾರಸ್ವಾಮಿ, ಶಾಸಕರಾದ ಸಿ.ಟಿ ರವಿ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ವೆನಿಲ್ಲಾ ಭಾಸ್ಕರ್ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.