JDS ಚಿಕ್ಕಮಗಳೂರು, ತಾಲ್ಲೂಕಿನ ಮಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಕ್ತರಹಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಯುಗಾದಿ ಹಬ್ಬದ ಪ್ರಯುಕ್ತ ಸೀರೆ ವಿತರಿಸಿದ್ದು, ಅಲ್ಲಿನ ಗ್ರಾಮಸ್ಥರು ಸೀರೆಯನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ ಎಂದು ಜೆಡಿಎಸ್ ನಗರ ಮಹಾಪ್ರಧಾನ ಕಾರ್ಯದರ್ಶಿ ಸಿ.ಕೆ.ಮೂರ್ತಿ ಹೇಳಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಹಣದ ಮೂಲಕ ಚುನಾವಣೆ ಎದುರಿಸಲು ಸಜ್ಜಾಗಿರುವ ಬಿಜೆಪಿಯನ್ನು ಜಿಲ್ಲೆಯ ಜನತೆ ಈ ಬಾರಿ ತಿರಸ್ಕರಿಸಲು ಮುಂದಾಗಿದ್ದಾರೆ. ಸತತವಾಗಿ 20 ವರ್ಷಗಳ ಕಾಲ ಶಾಸಕರಾಗಿ ಕಾರ್ಯನಿರ್ವಹಿಸಿದ್ದರೂ ಕೂಡಾ ಅಭಿವೃದ್ದಿ ಕಾರ್ಯ ಮರೀಚಿಕೆಯಾಗಿದೆ ಎಂದು ಆರೋಪಿಸಿದ್ದಾರೆ.
ಶಾಸಕ ಸಿ.ಟಿ.ರವಿ ಅವರು ಪ್ರಸ್ತುತ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಕ್ಷೇತ್ರವನ್ನು ಇಷ್ಟು ದಿನಗಳ ಆಳಿದ ಶಾಸಕರು ಮಾದರಿ ಕ್ಷೇತ್ರವನ್ನಾಗಿ ರೂಪಿಸಿಲ್ಲ. ಕೇವಲ ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿ ಸೀರೆ, ಹಣ, ಹೆಂಡದ ಮೂಲಕ ಚುನಾವಣೆ ಎದುರಿಸಲು ಸಾಧ್ಯ ಎಂಬುವ ಮನಸ್ಥಿತಿಯನ್ನು ತಕ್ಷಣವೇ ಬದಲಾಯಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
JDS ಈ ಬಾರಿ ಕ್ಷೇತ್ರದಲ್ಲಿ ಮತದಾರರು ಯಾವುದೇ ಆಮಿಷಕ್ಕೊಳಗಾಗದೇ ಚುನಾವಣೆ ಎದುರಿಸಲು ಸಿದ್ದರಾಗಿದ್ದಾರೆ. ಪ್ರತಿ ಬಾರಿಯು ಮೋದಿ, ಯಡಿಯೂರಪ್ಪ ಹಾಗೂ ಹಿಂದುತ್ವದ ಹೆಸರಿನಲ್ಲಿ ಚುನಾವಣೆ ಎದುರಿಸುವುದನ್ನು ಮೊದಲು ನಿಲ್ಲಿಸಬೇಕು. ಶಾಸಕರು ಅಭಿವೃದ್ದಿ ವಿಚಾರದಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದರೆ ಜನತೆ ತಾವಾಗಿಯೇ ಮತ ನೀಡುತ್ತಾರೆ. ಅಭಿವೃದ್ದಿ ಶೂನ್ಯವಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆ ಈ ಬಾರಿ ಬಿಜೆಪಿಯನ್ನು ತಿರಸ್ಕರಿಸಿ ಜೆಡಿಎಸ್‌ನತ್ತ ಒಲವು ಹೊಂದಲಿದ್ದಾರೆ ಎಂದಿದ್ದಾರೆ.
ರಾಜ್ಯ ಹಾಗೂ ಜಿಲ್ಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿ ಕೈಗೊಂಡ ಅಭಿವೃದ್ದಿ ಯನ್ನು ಜನತೆ ಮನಸ್ಸಿನಲ್ಲಿಟ್ಟುಕೊಂಡು ಮುಂದೆ ಜೆಡಿಎಸ್‌ಗೆ ಬೆಂಬಲ ಸೂಚಿಸಲಿದ್ದಾರೆ. ಇನ್ನೂ ಮುಂದಾದರೆ ಶಾಸಕರು ಇರುವಷ್ಟು ದಿನಗಳ ಕಾಲ ಯಾವುದೇ ಧೀಮಂತ ನಾಯಕರನ್ನು ಟೀಕಿಸುವುದು ಬಿಟ್ಟು ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳ ಬಗ್ಗೆ ಚಿಂತಿಸಿ ಎಂದು ಹೇಳಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.