Stress Management ಮನುಷ್ಯನ ಒತ್ತಡದ ಜೀವನ ಶೈಲಿಯಿಂದ ಅಧಿಕ ರಕ್ತದೊತ್ತಡ, ಮಧುಮೇಹ, ಮಾನಸಿಕ ಒತ್ತಡ ಸೇರಿದಂತೆ ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿದ್ದು ಕಾಲ ಕಾಲಕ್ಕೆ ವೈದ್ಯರ ಸಲಹೆ ಪಡೆದು ತಪಾಸಣೆ ನಡೆಸಿದ್ದಲ್ಲಿ ಪ್ರಾಥಮಿಕ ಹಂತದಲ್ಲಿಯೇ ರೋಗವನ್ನು ಗುಣಪಡಿಸಬಹುದು ಎಂದು ಡಾ|| ಸಾಗರ್ ಹೇಳಿದರು.
ಚಿಕ್ಕಮಗಳೂರು ಹೊರವಲಯದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಪ್ರಿಸರ‍್ಸ್ ಹೋಪ್ ಮಿನಿಸ್ಟರಿ ಆಫ್ ಇಂಡಿಯಾ ಸಂಯುಕ್ರಾಶ್ರಯದಲ್ಲಿ ಬಂಧಿಗಳಿಗೆ ಆರೋಗ್ಯ ತಪಾಸಣಾ ಶಿಬಿರಕ್ಕೆ ಅವರು ಚಾಲನೆ ನೀಡಿ ಮಾತನಾಡುತ್ತಿದ್ದರು.
ಬಂಧಿಗಳ ಆರೋಗ್ಯ ದೃಷ್ಟಿಯಿಂದ ಹಲವಾರು ಆರೋಗ್ಯ ಶಿಬಿರವನ್ನು ಇಲಾಖೆಯಿಂದ ಏರ್ಪಡಿಸಲಾಗಿತ್ತು.
Stress Management ಮನುಷ್ಯನಿಗೆ ಆರೋಗ್ಯವೇ ಮುಖ್ಯ. ಅದನ್ನು ಕಾಪಾಡಿಕೊಂಡು ಸುಸ್ಥಿರ ಜೀವನ ನಡೆಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಪ್ರಸ್ತುತ ಒತ್ತಡದ ಜೀವನದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತಿಮುಖ್ಯ. ಆ ಹಿನ್ನೆಲೆಯಲ್ಲಿ ಪ್ರತಿ ಯೊಬ್ಬರು ಮೊದಲು ಆರೋಗ್ಯದ ಬಗ್ಗೆ ನಿಗಾವಹಿಸಬೇಕು. ನಾವು ಆರೋಗ್ಯವಾಗಿದ್ದರೆ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ. ಆದ್ದರಿಂದ ಇಂತಹ ತಪಾಸಣಾ ಶಿಬಿರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪ್ರಿಸರ‍್ಸ್ ಹೋಮ್ ಮಿನಿಸ್ಟರಿ ಆಫ್ ಇಂಡಿಯಾ ಸದಸ್ಯೆ ಶ್ರೀಮತಿ ಮಂಜುಳಾ ಮಾತನಾಡಿ ಆರೋಗ್ಯವನ್ನು ಯಾರಿಂದರಲೂ ಎರವಲು ಪಡೆದುಕೊಳ್ಳಲು ಸಾಧ್ಯವಿಲ್ಲ. ಉತ್ತಮ ವ್ಯಾಯಾಮ, ನಿಯಮಿತ ಆಹಾರ ಸೇವನೆ ಯಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರಾಗೃಹ ಅಧೀಕ್ಷಕ ಶ್ರೀಶೈಲಾ ಎಸ್.ಮೇಟಿ ಬಂಧಿಗಳಿಗೆ ಕಾರಾಗೃಹದಲ್ಲಿ ಆರೋಗ್ಯ ಶಿಬಿರ ಸೇರಿದಂತೆ ಹಲವಾರು ರೀತಿಯ ಕೌಶಲ್ಯ ತರಬೇತಿಗಳನ್ನು ಆಯೋಜಿಸುವ ಮೂಲಕ ಬಿಡುಗಡೆ ನಂತರ ಸಾತ್ವಿಕ ಜೀವನ ನಡೆಸಲು ದಾರಿಯನ್ನು ತೋರಿಸುವ ಪ್ರಯತ್ನದಲ್ಲಿದ್ದೇವೆ ಎಂದು ಹೇಳಿದರು.
ಇದೇ ವೇಳೆ ಬಂಧಿಗಳಿಗೆ ರಕ್ತದೊತ್ತಡ, ಮಧುಮೇಹ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ಹಾಗೂ ಸಾಮಾನ್ಯ ರೋಗಗಳಾದ ಜ್ವರ, ಶೀತ, ಕೆಮ್ಮು, ಚರ್ಮರೋಗ ಮತ್ತು ಕೀಲುನೋವುಗಳಿಗೆ ಸಂಬಂಧಿಸಿದ ಔಷಧಿ ಮಾತ್ರೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರಾಗೃಹ ಜೈಲರ್ ಎಂ.ಕೆ.ನೆಲಧರಿ, ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
